ಗಂಗಾವತಿ (ಕೊಪ್ಪಳ):ಹಲವುಬೇಡಿಕೆ ಇಡೇರಿಸುವಂತೆ ಒತ್ತಾಯಿಸಿ ಕಳೆದೆರಡು ವಾರದಿಂದ ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಇಲಾಖೆಯ ಹೊರಗುತ್ತಿಗೆ ನೌಕರರು, ನಗರದಲ್ಲಿ ವಿನೂತನ ಪ್ರತಿಭಟನೆ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆದಿದ್ದಾರೆ.
ಗಂಗಾವತಿ: ಮಾಸ್ಕ್ ಇಲ್ಲದವರಿಗೆ ಉಚಿತ ಮಾಸ್ಕ್ ವಿತರಿಸಿದ ಪ್ರತಿಭಟನಾಕಾರರು - ಸರ್ಕಾರದ ವಿರುದ್ಧ ಪ್ರತಿಭಟನೆ
ವೈದ್ಯಕೀಯ ಇಲಾಖೆಯ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಸುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಇಂದು ವಿಭಿನ್ನವಾಗಿ ಪ್ರತಿಭಟಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿ ಪ್ರತಿಭಟಿಸಿದ್ದಾರೆ.
ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸಿದ ಪ್ರತಿಭಟನಾ ನಿರತರು
ಇಲ್ಲಿನ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಧರಣಿ ಹಮ್ಮಿಕೊಂಡಿದ್ದ ನೌಕರರು, ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಜನರಿಗೆ ನೀಡಿದ ಅತ್ಯುತ್ತಮ ಸೇವೆಯ ಭಾಗವಾಗಿ ಮಂಗಳವಾರ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸಿ ಪ್ರತಿಭಟಿಸಿದ್ದಾರೆ.
ಮಾಸ್ಕ್ ಇಲ್ಲದೇ ಬರುತ್ತಿದ್ದ ಜನರ ಬಳಿ ತೆರಳಿ ಪ್ರತಿಭಟನೆಯ ಭಾಗವಾಗಿ ಮಾಸ್ಕ್ ವಿತರಿಸಿದರು. ಮಾಸ್ಕ್ ಧರಿಸುವುದರಿಂದ ಆಗುವ ಪ್ರಯೋಜನ, ಹಾಕದಿರುವುದರಿಂದ ಉಂಟಾಗುವ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸಿ ಗಮನ ಸೆಳೆದರು.