ಕೊಪ್ಪಳ: ವಿವಿದೋದ್ಧೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ, ಗ್ರಾಮೀಣ ಪುನರ್ವಸತಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿವಿದೋದ್ಧೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ ಪ್ರತಿಭಟನೆ - ಕೊಪ್ಪಳ ಲೇಟೆಸ್ಟ್ ಪ್ರತಿಭಟನೆ ಸುದ್ದಿ
ವಿವಿದೋದ್ಧೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ, ಗ್ರಾಮೀಣ ಪುನರ್ವಸತಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು. 2006-07 ರಲ್ಲಿ ಸರ್ಕಾರ ಗ್ರಾಮೀಣ ಪುನರ್ವಸತಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ 176 ತಾಲೂಕಿಗೆ ಹಾಗೂ 5628 ಗ್ರಾಮ ಪಂಚಾಯ್ತಿಗಳಿಗೆ ಪದವೀಧರ ವಿಕಲಚೇತನರನ್ನು ಎಂಆರ್ಡಬ್ಲೂ ಆಗಿ ಹಾಗೂ ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿಕಲಚೇತನರನ್ನು ವಿಆರ್ಡಬ್ಲೂಗಳಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಆದರೆ, ಹೀಗೆ ಗೌರವಧನದ ಆಧಾರದ ಮೇಲೆ ನೇಮಕವಾಗಿರುವ ಇವರಿಗೆ ಉದ್ಯೋಗ ಭದ್ರತೆ ಇಲ್ಲದಂತಾಗಿದೆ.
ಇನ್ನು ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಇವರನ್ನು ಖಾಯಂಗೊಳಿಸಬೇಕು ಹಾಗೂ ವಿಕಲಚೇತನರಿಗೆ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಭತ್ಯೆಯನ್ನು ಸಮಾನವಾಗಿ ನೀಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.