ಕೊಪ್ಪಳ :ಕನ್ನಡ ಚಿತ್ರರಂಗದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನೆಲ್ಲ ಅಗಲಿ ತಿಂಗಳುಗಳೇ ಕಳೆದರೂ ಅವರ ನೆನಪು, ಆ ಸಾಮಾಜಿಕ ಕಾರ್ಯಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿವೆ.
ಪುನೀತ್ ರಾಜಕುಮಾರ್ ಮೂರ್ತಿ ಪ್ರತಿಷ್ಠಾಪನೆ ದಿನವೂ ಒಂದಿಲ್ಲೊಂದು ರೀತಿಯಲ್ಲಿ ಅಭಿಮಾನಿಗಳು ಅಪ್ಪು ಮೇಲಿನ ತಮ್ಮ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಅವರ ಹೆಸರಿನಲ್ಲಿ ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ. ಜೊತೆಗೆ ಅವರನ್ನು ಸ್ಮರಿಸುವ ಕಾರ್ಯವೂ ನಡೆಯುತ್ತಿದೆ.
ಇದನ್ನೂ ಓದಿ:ಮಾಸದ ಅಪ್ಪು ನೆನಪು : ರಥದಲ್ಲಿ ವಿರಾಜಮಾನವಾದ 'ಪವರ್ ಸ್ಟಾರ್' ಭಾವಚಿತ್ರ
ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 16ನೇ ವಾರ್ಡ್ನ ಸುಣಗಾರ ಓಣಿಯಲ್ಲಿ ಅಭಿಮಾನಿಗಳಿಂದ ಪುನೀತ್ ರಾಜಕುಮಾರ್ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
25 ಸಾವಿರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಶಿಲಾಮೂರ್ತಿಯನ್ನು ಅಭಿಮಾನಿಗಳು ಅತ್ಯಂತ ಸಂಭ್ರಮದಿಂದ ಪ್ರತಿಷ್ಠಾಪಿಸಿ ಅನ್ನ ಸಂತರ್ಪಣೆ ನಡೆಸಿದರು.