ಕೊಪ್ಪಳ: ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಷಯ ನನಗೆ ಗೊತ್ತಿಲ್ಲ. ಆದರೆ, ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಕಾಂಗ್ರೆಸ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಅವರು ಮೂರು ಬಾರಿ ಶಾಸಕರಾಗಿದ್ದಾರೆ. ಅವರು ರಾಜೀನಾಮೆಯಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ. ಅವರು ರಾಜೀನಾಮೆ ನೀಡಿರುವ ವಿಷಯ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುತ್ತಾರೆ ಎಂದು ಹೇಳುತ್ತಿರುವ ಶಾಸಕರೆಲ್ಲರೂ ತಮ್ಮ ಕ್ಷೇತ್ರದಲ್ಲಿಯೇ ಇದ್ದಾರೆ. ಬೇರೆ ಪಕ್ಷದವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯೂ ಇದೆ ಎಂದು ಪರೋಕ್ಷವಾಗಿ ಆಪರೇಷನ್ ಬಿಜೆಪಿ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತರು ಯಾರು ಎಂದು ಕೇಳಿದಾಗ, ಅವುಗಳ ಪಟ್ಟಿ ನೀವೇ ಮಾಡಿದವರು ಎನ್ನುವ ಮೂಲಕ ಹೆಸರು ಹೇಳದೇ ಮೌನವಹಿಸಿದ್ದರು.