ಗಂಗಾವತಿ: ಚಹಾದಲ್ಲಿ ನಿದ್ರೆ ಮಾತ್ರೆ ಕೊಟ್ಟು ತನ್ನ ಸಿಬ್ಬಂದಿ ಮೇಲೆಯೇ ಇಟ್ಟಿಗೆಭಟ್ಟಿ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಹೀರೆಬೆಣಕಲ್ ಸೀಮಾದಲ್ಲಿನ ಇಟ್ಟಿಗೆ ಭಟ್ಟಿಯೊಂದರಲ್ಲಿ ನಡೆದಿದೆ.
ಘಟನೆ ನಡೆದು ಮೂರು ತಿಂಗಳ ಬಳಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ಇದೀಗ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈಕೆಗೆ ಮದುವೆ ಕೂಡ ಆಗಿದ್ದು, ಈಗ ಮೂರು ತಿಂಗಳ ಗರ್ಭಿಣಿ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಪಟ್ಟಣದ ನಿವಾಸಿ ಇಟ್ಟಿಗೆ ಉದ್ಯಮಿ ಮಹೇಶ ನಾಗಪ್ಪ ಕಳಬಳಿ ಎಂಬ ವ್ಯಕ್ತಿಯ ಮೇಲೆ ಜಾತಿ ನಿಂದನೆ, ಲೈಂಗಿಕ ದೌರ್ಜನ್ಯ, ಅತ್ಯಾಚಾರದಂತ ನಾನಾ ಐಪಿಸಿ ಕಲಂಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಸಂತ್ರಸ್ತೆಯು ಮಹೇಶನ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದು, ಕಳೆದ ಜೂ.7ರಂದು ಬೆಳಗ್ಗೆ ನಾಲ್ಕು ಗಂಟೆಗೆ ಕೆಲಸದ ನೆಪದಲ್ಲಿ ಭಟ್ಟಿಗೆ ಕರೆದೊಯ್ದಿದ್ದಾನೆ. ಬಳಿಕ ಚಹಾದಲ್ಲಿ ನಿದ್ರೆ ಮಾತ್ರೆ ಕೊಟ್ಟು ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾಳೆ.