ಕುಷ್ಟಗಿ(ಕೊಪ್ಪಳ):ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದ 13 ಜನ ಪ್ರಗತಿಪರ ಹೋರಾಟಗಾರರ ಮೇಲಿನ ಪ್ರಕರಣ ಕೈ ಬಿಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು, ಕುಷ್ಟಗಿ ತಹಶೀಲ್ದಾರ್ ವಿಜಯಾ ಅವರಿಗೆ ಮನವಿ ಸಲ್ಲಿಸಿದರು.
ಪ್ರಗತಿಪರ ಹೋರಾಟಗಾರರ ಮೇಲಿನ ಕ್ರಿಮಿನಲ್ ಕೇಸ್ ಹಿಂಪಡೆಯುವಂತೆ ಮನವಿ - koppal news
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದ ಪ್ರಗತಿಪರರ ವಿರುದ್ಧದ ಕ್ರಿಮಿನಲ್ ಕೇಸ್ ಕೈ ಬಿಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು, ಕುಷ್ಟಗಿ ತಹಶೀಲ್ದಾರ್ ವಿಜಯಾ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಒಕ್ಕೂಟದ ಮುಖಂಡ ವಸಂತ ಮೇಲಿನಮನಿ, ಚಿತ್ರದುರ್ಗದ ಚಳ್ಳಕೆರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಸಾಮಾಜಿಕ ಅಂತರ ಉಲ್ಲಂಘಿಸಿದರೆ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ, ರೈತರ ಪರವಿದ್ದ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದ ಪ್ರಗತಿಪರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿರುವುದನ್ನು ಪ್ರಶ್ನಿಸಿದರು.
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರು ಪ್ರಗತಿಪರ ಹೋರಾಟ ಹತ್ತಿಕ್ಕಲು ಹೊರಟಿದ್ದಾರೆ. 13 ಜನ ಪ್ರಗತಿಪರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿರುವ ಸಿಪಿಐ ಮೌನೇಶ್ವರ ಪಾಟೀಲ ಅವರನ್ನ ಅಮಾನತುಗೊಳಿಸಬೇಕು ಎಂದು ಪೊಲೀಸ್ ಇಲಾಖೆ ವಿರುದ್ಧ ವಾಗ್ದಾಳಿ ನಡೆಸಿದರು.