ಕರ್ನಾಟಕ

karnataka

ETV Bharat / state

ಗಂಗಾವತಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ನಗರಸಭೆಗೆ ಮನವಿ - ಗಂಗಾವತಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಆಗ್ರಹ

ಗಂಗಾವತಿ ನಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ ಬಡವರಿಗೆ ಕಡಿಮೆ ದರದಲ್ಲಿ ಊಟ, ಉಪಹಾರ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿಜಯ ಸೇನೆ ಸಂಘಟನೆಯ ಪದಾಧಿಕಾರಿಗಳು ನಗರಸಭೆಗೆ ಮನವಿ ಸಲ್ಲಿಸಿದರು.

Indira Canteen in Gangavathi , ಗಂಗಾವತಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಆಗ್ರಹ
ಗಂಗಾವತಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಆಗ್ರಹ

By

Published : Dec 10, 2019, 7:08 PM IST

ಗಂಗಾವತಿ: ನಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ ಬಡವರಿಗೆ ಕಡಿಮೆ ದರದಲ್ಲಿ ಊಟ, ಉಪಹಾರ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿಜಯ ಸೇನೆ ಸಂಘಟನೆಯ ಪದಾಧಿಕಾರಿಗಳು ನಗರಸಭೆಗೆ ಮನವಿ ಸಲ್ಲಿಸಿದರು.

ಗಂಗಾವತಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಆಗ್ರಹ

ಸಂಘಟನೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಲಕ್ಷ್ಮಪ್ಪ ರಾಠೋಡ್ ನೇತೃತ್ವದಲ್ಲಿ ನಗರಸಭೆಗೆ ತೆರಳಿದ ಸಂಘಟನೆಯ ಪದಾಧಿಕಾರಿಗಳು, ನಗರಸಭೆಯ ಪ್ರಭಾರ ಪೌರಾಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಆರ್. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು..

ಬಳಿಕ ಮಾತನಾಡಿದ ಲಕ್ಷ್ಮಪ್ಪ ರಾಠೋಡ್, ಕಳೆದ ಮೂರು ವರ್ಷದಿಂದ ಗುಂಡಮ್ಮಕ್ಯಾಂಪ್​ನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಉದ್ದೇಶಕ್ಕೆ ಕಟ್ಟಡ ನಿರ್ಮಾಣವಾಗಿತ್ತು. ಆದರೆ ನಿರ್ವಹಣೆ ಇಲ್ಲದೇ ಕಟ್ಟಡ ಕಿಡಿಗೇಡಿಗಳಿಂದ ಹಾನಿಗೀಡಾಗಿದೆ. ಈಗ ಸರ್ಕಾರದ ಹಣ ಬಳಸಿ ರಿಪೇರಿ ಮಾಡಲಾಗಿದೆ. ಕೂಡಲೇ ಅಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details