ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜನಹಿತ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದೆ.
ಈ ಬಗ್ಗೆ ನಗರದ ಮಿನಿ ವಿಧಾನಸೌಧದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮೇಶ ಕೋಟೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ಮನವಿ ಸಲ್ಲಿಸಿದರು.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಅಲ್ಲದೇ ಕಳವಳಕಾರಿ ಪ್ರಮಾಣದಲ್ಲಿ ಜನ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಆರೋಗ್ಯ ಇಲಾಖೆ ನೀಡುತ್ತಿರುವ ಯಾವುದೇ ಮಾನದಂಡ ಮತ್ತು ಮುಂಜಾಗ್ರತಾ ಕ್ರಮಗಳನ್ನು ಜನ ಪಾಲಿಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಜನರಲ್ಲಿ ಆತಂಕ ಉಂಟಾಗಿದೆ ಎಂದರು.
ನಾಗರಿಕರು, ವ್ಯಾಪರಿಗಳು ಸೇರಿದಂತೆ ನಾನಾ ವಲಯದಲ್ಲಿನ ಸಿಬ್ಬಂದಿ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಈ ಹಿನ್ನೆಲೆ ಕೂಡಲೇ ಜಿಲ್ಲಾಧಿಕಾರಿಗಳು, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಸಂಘಟಕರು ಒತ್ತಾಯಿಸಿದ್ದಾರೆ.