ಕುಷ್ಟಗಿ (ಕೊಪ್ಪಳ): ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಜನರ ಅನಗತ್ಯ ಓಡಾಟವನ್ನು ನಿರ್ಬಂಧಿಸಲಾಗಿದೆ.
ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಅನಗತ್ಯ ಓಡಾಟಕ್ಕೆ ನಿರ್ಬಂಧ
ಸಾರ್ವಜನಿಕರ ಅಗತ್ಯ ಕೆಲಸಗಳಿಗೆ ಸಂಬಂಧಿಸಿದ ಅಧಿಕಾರಿಗಳಿದ್ದರೆ ಮಾತ್ರ ಸಾರ್ವಜನಿಕರನ್ನು ಒಳಗೆ ಬಿಡಲಾಗುತ್ತಿದೆ. ಮನವಿಗಳಿದ್ದರೆ ಸ್ವೀಕರಿಸಿ ಅಲ್ಲಿಯೇ ಸ್ವೀಕೃತಿ ಪತ್ರ ನೀಡಿ ಸಂಬಂಧಿಸಿದ ಅಧಿಕಾರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಕಚೇರಿಯಲ್ಲಿ ಭೂಮಾಪನಾ ಇಲಾಖೆ, ಸಬ್ ರಜಿಸ್ಟ್ರಾರ್ ಕಚೇರಿ, ಖಜಾನೆ ಇಲಾಖೆಗಳಿವೆ. ಸಾರ್ವಜನಿಕರ ಅಗತ್ಯ ಕೆಲಸಗಳಿಗೆ ಸಂಬಂಧಿಸಿದ ಅಧಿಕಾರಿಗಳಿದ್ದರೆ ಮಾತ್ರ ಸಾರ್ವಜನಿಕರನ್ನು ಒಳಗೆ ಬಿಡಲಾಗುತ್ತಿದೆ. ಮನವಿಗಳಿದ್ದರೆ ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿ ಸಂಬಂಧಿಸಿದ ಅಧಿಕಾರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಪಹಣಿ ಹಾಗೂ ಇತ್ಯಾದಿ ಸೇವೆಗಳು ಹೊರ ಆವರಣದ ಕಿಟಕಿಗಳ ಕೌಂಟರ್ ಮೂಲಕ ನಡೆಯುತ್ತಿವೆ. ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾದರೆ ಇಡೀ ಕಚೇರಿ ಸೀಲ್ ಡೌನ್ ಮಾಡುವ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ತಹಶೀಲ್ದಾರ್ ಕಚೇರಿಯ ಮುಖ್ಯದ್ವಾರದಲ್ಲಿ ತಪಾಸಣೆ ನಡೆಸಿ 3-4 ಜನಕ್ಕೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ಅವರು ಹೋಗಿ ಬರುವವರೆಗೂ ಉಳಿದವರು ಕಾಯಬೇಕಿದೆ.