ಕುಷ್ಟಗಿ :ಸೀಮಂತ ಕಾರ್ಯಕ್ರಮಕ್ಕೆಂದು ಬಾಗಲಕೋಟೆ ಜಿಲ್ಲೆ ಬಾದಾಮಿಗೆ ತೆರಳಿದ್ದ ತಾಲೂಕಿನ 18 ಜನರನ್ನು ಊರಿಗೆ ಹಿಂದಿರುಗುವ ಮೊದಲೇ ಕ್ವಾರಂಟೈನ್ ಮಾಡಲಾಗಿದೆ ಎಂದು ತಹಶೀಲ್ದಾರ್ ಎಂ.ಸಿದ್ದೇಶ್ ಮಾಹಿತಿ ನೀಡಿದ್ದಾರೆ.
ಕುಷ್ಟಗಿಯಲ್ಲಿ 18 ಜನರ ಗಂಟಲು ದ್ರವ ಪರೀಕ್ಷೆಗೆ ರವಾನೆ: ತಹಶೀಲ್ದಾರ್ ಮಾಹಿತಿ - ಕುಷ್ಟಗಿಯ 18 ಜನರ ಗಂಟಲು ದ್ರವ ಪರೀಕ್ಷೆಗೆ ರವಾನೆ
ಬಾಗಲಕೋಟೆಯ ಬಾದಾಮಿಗೆ ಕಾರ್ಯಕ್ರಮಕ್ಕೆ ತೆರಳಿದ್ದ ಕುಷ್ಟಗಿ ತಾಲೂಕಿನ 18 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ ಗಂಟಲು ದ್ರವ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಕುಷ್ಟಗಿಯ 18 ಜನರ ಗಂಟಲು ದ್ರವ ಪರೀಕ್ಷೆಗೆ ರವಾನೆ
ತಾಲೂಕಿನ ನಿಲೋಗಲ್ ಗ್ರಾಮದ 18 ಜನ ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದರು. ಅವರು ಗ್ರಾಮಕ್ಕೆ ವಾಪಸ್ಸಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರ್ಧ ದಾರಿಯಲ್ಲೇ ತಡೆದು ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಬಳಿಕ ಎಲ್ಲರನ್ನು ನಿಡಶೇಸಿ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದರು.
ಇವರಲ್ಲಿ ಯಾರಿಗೂ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಎಲ್ಲರ ಗಂಟಲು ದ್ರವ ಪರೀಕ್ಷೆ ಕಳುಹಿಸಿಲಾಗಿದೆ. ಶುಕ್ರವಾರ ವರದಿ ಕೈ ಸೇರಲಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
TAGGED:
ಗಂಟಲು ದ್ರವ ಪರೀಕ್ಷೆಗೆ ರವಾನೆ