ಗಂಗಾವತಿ:ತಾಲೂಕಿನ ರಾಂಪೂರ, ಆನೆಗೊಂದಿ ಮತ್ತು ಮಲ್ಲಾಪುರ ಭಾಗದಲ್ಲಿ ನಡೆಯುತ್ತಿರುವ ವಿಜಯನಗರದ ಉಪ ಕಾಲುವೆಗಳ ಅಧುನೀಕರಣ ಕಾಮಗಾರಿಗೆ ಅಪಾರ ಪ್ರಮಾಣದ ಮೊರಂ ಅನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆಯೆನ್ನುವ ಆರೋಪ ಕೇಳಿಬಂದಿದೆ.
ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿ ಎರೆಬಿಂಚಿಗುಡ್ಡದ ಪ್ರದೇಶದಲ್ಲಿ ಕೃಷಿ ಉದ್ದೇಶಕ್ಕೆ ಮೀಸಲಾಗಿಟ್ಟಿದ್ದ ವ್ಯಕ್ತಿಯೊಬ್ಬರ ಪಟ್ಟಾ ಜಮೀನಿನ ಮೂಲಕ ಅಪಾರ ಪ್ರಮಾಣದ ಮೊರಂ ಅನ್ನು ರಾತ್ರೋರಾತ್ರಿ ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.