ಕೊಪ್ಪಳ: ಕಾಂಗ್ರೆಸ್ನಲ್ಲಿ ಸಿಎಂ ಖುರ್ಚಿಗೆ ಡಿ.ಕೆ. ಶಿವಕುಮಾರ್ ಬಹಳ ದಿನಗಳಿಂದ ಕಾಯುತ್ತಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ಆಪ್ತರು ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಬಿಂಬಿಸುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೇ ಬಿಡ್ತೀನಿ ಎಂದು ಕನಸು ಕಾಣುತ್ತಿದ್ದಾರೆ. ಆದರೆ ಅಂತಿಮವಾಗಿ ಜನರು ತೀರ್ಮಾನ ಮಾಡುತ್ತಾರೆ ಎಂದರು.
ಸಿದ್ದರಾಮಯ್ಯ ಸಿಎಂ ಆಗಬೇಕು ಅಂದರೂ ಸಿಎಂ ಆಗಲ್ಲ, ಪಕ್ಷಕ್ಕೆ ಬಹುಮತ ಬಂದ ನಂತರ ಆ ಪಕ್ಷದ ಶಾಸಕರು ತೀರ್ಮಾನ ಮಾಡುತ್ತಾರೆ. ಸಿದ್ದರಾಮಯ್ಯ ಆಪ್ತರು ಈಗಲೇ ಮುಂದಿನ ಸಿಎಂ ಸಿದ್ದರಾಮಯ್ಯ ಅಂತಾ ಹೇಳುತ್ತಿದ್ದಾರೆ. ಇದನ್ನು ನೋಡಿದರೆ ಮತದಾರರನ್ನು ಖರೀದಿ ಮಾಡಿದ ತರಹ ಕಾಣುತ್ತಿದೆ ಎಂದರು.