ಕೊಪ್ಪಳ: ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಖದೀಮರು ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಕೊಪ್ಪಳದಲ್ಲಿ ಸರಣಿ ಕಳ್ಳತನ: ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ
ಖದೀಮರು ಕುಷ್ಟಗಿ ರಸ್ತೆಯಲ್ಲಿರುವ ಮೆಡಿಕಲ್ ಶಾಪ್, ಟ್ರ್ಯಾಕ್ಟರ್ ಬಿಡಿ ಭಾಗಗಳ ಮಾರಾಟ ಅಂಗಡಿ ಹಾಗೂ ಬಾರ್ನಲ್ಲಿ ಕಳ್ಳತನ ಮಾಡಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
![ಕೊಪ್ಪಳದಲ್ಲಿ ಸರಣಿ ಕಳ್ಳತನ: ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆ Serial theft in Koppal](https://etvbharatimages.akamaized.net/etvbharat/prod-images/768-512-13237621-thumbnail-3x2-lek.jpg)
ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕುಷ್ಟಗಿ ರಸ್ತೆಯಲ್ಲಿರುವ ಮೆಡಿಕಲ್ ಶಾಪ್, ಎರಡು ಟ್ರ್ಯಾಕ್ಟರ್ ಬಿಡಿ ಭಾಗಗಳ ಮಾರಾಟ ಅಂಗಡಿ ಹಾಗೂ ಬಾರ್ನಲ್ಲಿ ಕಳ್ಳತನ ಮಾಡಿದ್ದಾರೆ. ಅಂಗಡಿಗಳ ಶೆಟರ್ ಮುರಿದು ಒಳನುಗ್ಗಿದ ಖದೀಮರು ಹಣಕ್ಕಾಗಿ ಹುಡುಕಾಡಿದ್ದಾರೆ. ಕೊನೆಗೂ ಹಣ ಸಿಕ್ಕದ ಹಿನ್ನೆಲೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ, ಆತನ ಬಳಿಯಿದ್ದ ಕ್ಯಾಶ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated : Oct 2, 2021, 2:27 PM IST