ಕೊಪ್ಪಳ:ತಾಲೂಕಿನ ಹೊಸಲಿಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಕೊಪ್ಪಳದಲ್ಲಿ ಐದು ವಾಹನಗಳ ನಡುವೆ ಭೀಕರ ಸರಣಿ ಅಪಘಾತ - ಕೊಪ್ಪಳದ ಹೊಸಲಿಂಗಾಪುರದಲ್ಲಿ ಅಪಘಾತ
ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಮೊದಲಿಗೆ ನಿಂತಿದ್ದ ಲಾರಿಗೆ ಟಿಪ್ಪರ್ ಬಂದು ಡಿಕ್ಕಿ ಹೊಡೆದಿದ್ದು, ಟಿಪ್ಪರ್ ಹಿಂದೆಯೇ ಬರುತ್ತಿದ್ದ ಇನ್ನುಳಿದ ಮೂರು ಟಿಪ್ಪರ್ಗಳು ಸಹ ಬಂದು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಒಟ್ಟು ಐದು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಲಾರಿ ಚಾಲಕ ರಾತ್ರಿ ಊಟಕ್ಕೆ ಲಾರಿ ನಿಲ್ಲಿಸಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಐದು ವಾಹನಗಳ ನಡುವೆ ನಡೆದ ಈ ಅಪಘಾತ ನಿಜಕ್ಕೂ ಭಯಾನಕವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಘಟನೆ ಬಳಿಕ ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.