ಗಂಗಾವತಿ: ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಾನಾ ಪಕ್ಷಗಳ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದು, ಇದೀಗ ಮುಂದಿನ ಐದು ವರ್ಷಗಳ ಕಾಲ ಆಡಳಿತ ನಡೆಸಲು ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಗ್ರಾಪಂ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲು ಆಯ್ಕೆ ಪ್ರಕ್ರಿಯೆಗೆ ದಿನಾಂಕ ನಿಗದಿ - Gram panchayat President-Vice President reservation selection process
ಗಂಗಾವತಿ ತಾಲೂಕಿನ ಒಟ್ಟು 42 ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಸದಸ್ಯರು ಆಡಳಿತ ನಡೆಸಲು ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆಗೆ ದಿನಾಂಕ ನಿಗದಿ ಮಾಡಲಾಗಿದೆ.
ವಿಕಾಸ್ ಕಿಶೋರ್ ಸುರಾಳ್ಕರ್
ಜ.11 ರಂದು ಕನಕಗಿರಿಯ ನಂದಿ ಚಿತ್ರಮಂದಿರದಲ್ಲಿ, ಜ.12 ರಂದು ಬೆಳಗ್ಗೆ 10.30 ಕ್ಕೆ ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಶ್ರಮಿಕ ಭವನದಲ್ಲಿ ಮತ್ತು ಶಿವೆ ಚಿತ್ರಮಂದಿರದಲ್ಲಿ ಆಯಾ ತಾಲೂಕಿನ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಮಾಡಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.
ಇನ್ನು ಕಾರಟಗಿ, ಕನಕಗಿರಿ ಹಾಗೂ ಗಂಗಾವತಿ ತಾಲೂಕಿನ ಒಟ್ಟು 42 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.