ಗಂಗಾವತಿ: ಹೆಚ್ಚುವರಿ ವಾಹನ ಕೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಎಸ್ಎಫ್ಐ ವತಿಯಿಂದ ಪ್ರತಿಭಟನೆ - ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಎಸ್ಎಫ್ಐ ವತಿಯಿಂದ ಪ್ರತಿಭಟನೆ
ಹೆಚ್ಚುವರಿ ವಾಹನ ಕೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಎಸ್ಎಫ್ಐ ವತಿಯಿಂದ ಪ್ರತಿಭಟನೆ
ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಎಸ್ಎಫ್ಐ ವತಿಯಿಂದ ಪ್ರತಿಭಟನೆ
ಜ.15ರಂದು ಢಣಾಪುರ ಗ್ರಾಮಕ್ಕೆ ಮಧ್ಯಾಹ್ನ ಎರಡು ಸಾರಿಗೆ ವಾಹನ ಬಿಡಬೇಕಿತ್ತು. ಆದರೆ ಅಧಿಕಾರಿಗಳು ಒಂದನ್ನು ಮಾತ್ರ ಬಿಟ್ಟು ಮತ್ತೊಂದನ್ನು ಬಿಟ್ಟಿರಲಿಲ್ಲ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದ ಕಾರಣಕ್ಕೆ ವಿದ್ಯಾರ್ಥಿಗಳು ಈ ಬಗ್ಗೆ ಘಟಕದ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಇದರಿಂದ ಅಸಮಾಧಾನಗೊಂಡ ಅಧಿಕಾರಿಗಳು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
TAGGED:
ಎಸ್ಎಫ್ಐ ಪ್ರತಿಭಟನೆ ಗಂಗಾವತಿ