ಕೊಪ್ಪಳ:ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ರಾಜೀನಾಮೆ ಕೊಡಿಸಿ ಕರೆದುಕೊಂಡು ಹೋಗುವಾಗ ಸಿ.ಪಿ ಯೋಗೇಶ್ವರ್ ಅವರಿಗೆ ಗೊತ್ತಾಗಲಿಲ್ಲವೇ? ಅವರಿಗೆ ಈಗ ಜ್ಞಾನೋದಯವಾದಂತಿದೆ ಎಂದು ಮಾಜಿ ಸಚಿವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದ್ದಾರೆ.
ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ತಂಗಡಗಿ, ರಾಜ್ಯದಲ್ಲಿ ಮೂರು ಪಕ್ಷಗಳ ಸರ್ಕಾರವಿದೆ ಎಂದು ಸಿಪಿ ಯೋಗೇಶ್ವರ್ ಈಗ ಹೇಳ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಮಾಡಿದಿರಲ್ಲ ಆಗ ನಿಮಗೆ ಗೊತ್ತಾಗಲಿಲ್ಲವಾ? ಆಗ ರಾಜ್ಯದ ಅಭಿವೃದ್ಧಿಗಾಗಿ ಶಾಸಕರ ಕರೆದುಕೊಂಡು ಹೋದಿರೋ ಅಥವಾ ಕೊಳ್ಳೆ ಹೊಡೆಯಲು ಹೋದಿರೋ ಎಂದು ನಾವು, ಈ ರಾಜ್ಯದ ಜನರು ನಿಮ್ಮನ್ನು ಕೇಳಬೇಕಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಹಣ ಕೊಟ್ಟು ಕರೆದುಕೊಂಡು ಹೋಗಿದ್ದೀರಿ ಎಂದು ಆರೋಪಿಸಿದರು.