ಕರ್ನಾಟಕ

karnataka

ETV Bharat / state

ಶಾಲೆಯಲ್ಲಿ ವಿದ್ಯುತ್​​ ಶಾರ್ಟ್ ಸರ್ಕ್ಯೂಟ್​​: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ - undefined

ಶಾಲೆಯೊಂದರ ಕೊಠಡಿಯಲ್ಲಿ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​​ ಆಗಿ ಬೆಂಕಿ ಹೊತ್ತಿ ಉರಿದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ವಿದ್ಯತ್​​ ಶಾರ್ಟ್ ಸರ್ಕ್ಯೂಟ್​​

By

Published : Jul 12, 2019, 11:29 AM IST

ಕೊಪ್ಪಳ:ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಕೊಠಡಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ, ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇ ಅರಳಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಶಾಲೆಯ ವಿಜ್ಞಾನ ವಿಭಾಗದ ಪ್ರಯೋಗಾಲಯದಲ್ಲಿ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಕಂಪ್ಯೂಟರ್, ಟಿವಿ ಸೇರಿದಂತೆ ಹಲವಾರು ದಾಖಲೆ ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಸುಮಾರು 4 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ವಸ್ತುಗಳು ಹಾಗೂ ಶಾಲಾ ದಾಖಲಾತಿಗಳು ಬೆಂಕಿಯಲ್ಲಿ ಸುಟ್ಟು ಕರುಕಲಾಗಿವೆ. ಇದು ಶಾರ್ಟ್ ಸರ್ಕ್ಯೂಟ್ ನಿಂದ ಆದ ಘಟನೆಯಾ? ಅಥವಾ ಕಿಡಿಗೇಡಿಗಳ ಕೃತ್ಯವಾ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

For All Latest Updates

TAGGED:

ABOUT THE AUTHOR

...view details