ಗಂಗಾವತಿ:ತಾಲೂಕಿನ ಆನೆಗೊಂದಿ ಸಮೀಪ ಇರುವ ಶ್ರೀಕೃಷ್ಣ ದೇವರಾಯನ ಸಮಾಧಿ ಎಂದು ಭಾವಿಸಲಾಗುತ್ತಿರುವ 64 ಕಾಲಿನ ಮಂಟಪ ಜಲಾವೃತವಾಗಿದೆ.
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದೀಗ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 64 ಕಾಲಿನ ಮಂಟಪ ಸೇರಿದಂತೆ ಇತರ ಸ್ಮಾರಕಗಳು ಜಲಾವೃತವಾಗಿವೆ.