ಕರ್ನಾಟಕ

karnataka

ETV Bharat / state

ನೀವೆಲ್ಲಾ ಆಶೀರ್ವದಿಸಿ ಗೆಲ್ಲಿಸಬೇಕು.. ಮದುವೆ ವೇದಿಕೆಯಲ್ಲೂ ಸಿದ್ದರಾಮಯ್ಯ ರಾಜಕೀಯ ಭಾಷಣ - ಮದುವೆ ವೇದಿಕೆಯಲ್ಲೂ ಸಿದ್ದರಾಮಯ್ಯ ರಾಜಕೀಯ ಭಾಷಣ

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿರುವ ಇಕ್ಬಾಲ್ ಅನ್ಸಾರಿ ಅವರನ್ನು ನೀವೆಲ್ಲಾ ಆರ್ಶೀವಾದಿಸಿ ಗೆಲ್ಲಿಸಬೇಕು ಎಂದು ಜನರಿಗೆ ಕರೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ.

Siddaramaiah political speech
ಮಾಜಿ ಸಿಎಂ ಸಿದ್ದರಾಮಯ್ಯ

By

Published : Nov 20, 2022, 9:33 PM IST

ಗಂಗಾವತಿ(ಕೊಪ್ಪಳ):ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿರುವ ಇಕ್ಬಾಲ್ ಅನ್ಸಾರಿ ಅವರನ್ನು ನೀವೆಲ್ಲಾ ಆಶೀರ್ವದಿಸಿ ಗೆಲ್ಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಜನರಿಗೆ ಕರೆ ಕೊಟ್ಟಿದ್ದಾರೆ.

ಗಂಗಾವತಿ ವಿಧಾನಸಭಾ ಕ್ಷೇತ್ರದ ಒನಬಳ್ಳಾರಿ ಗ್ರಾಮದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಮುಖಂಡರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ಮೈಕ್​ನಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ರಾಜಕೀಯ ಭಾಷಣ ಮಾಡಿ ಅಚ್ಚರಿ ಮೂಡಿಸಿದರು.

ಇದೇ ವೇದಿಕೆಯಲ್ಲಿ ಮಾಜಿಸಚಿವ, ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ, ಹಾಲಿ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಭೀಮಾನಾಯ್ಕ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿಯೇ ಬಹಿರಂಗವಾಗಿ ಸಿದ್ದರಾಮಯ್ಯ ಅನ್ಸಾರಿಗೆ ಬೆಂಬಲಿಸುವಂತೆ ಕರೆ ನೀಡುವ ಮೂಲಕ ಚುನಾವಣಾ ಅಖಾಡವನ್ನು ಕಾವೇರುವಂತೆ ಮಾಡಿದ್ದಾರೆ.

ಇದನ್ನೂ ಓದಿ:ಅಹಿಂದ ವೋಟ್ ಡಿಲಿಷನ್ ಬಿಜೆಪಿಗರ ಕುತಂತ್ರ: ಸಿದ್ದರಾಮಯ್ಯ ವಾಗ್ದಾಳಿ

ABOUT THE AUTHOR

...view details