ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಸೇರಿ, 6 ಹೊಸ ಕೊರೊನಾ ಪ್ರಕರಣಗಳು ಪತ್ತೆ! - koppal DC p. sunil kumar news

ಕೊಪ್ಪಳ ಜಿಲ್ಲೆಯಲ್ಲಿಂದು ನಾಲ್ವರು ಪುರುಷರಿಗೆ ಹಾಗೂ ಇಬ್ಬರು ಮಹಿಳೆಯರಿಗೆ ಸೋಂಕು ದೃಢವಾಗಿದೆ. ಸೋಂಕಿತ ಆರು ಜನರಲ್ಲಿ ಮೂವರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದ ಒಂದೇ ಕುಟುಂಬದ 45 ವರ್ಷದ ಪುರುಷ, 40 ವರ್ಷದ ಮಹಿಳೆ ಹಾಗೂ 17 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ.

koppal
ಜಿಲ್ಲಾಧಿಕಾರಿ ಪಿ. ಸುನಿಲ್​​ ಕುಮಾರ್

By

Published : Jun 19, 2020, 4:40 PM IST

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ ಆರು ಜನರಿಗೆ ಸೋಂಕು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 28 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್​​ ಕುಮಾರ್ ಮಾಹಿತಿ ನೀಡಿದ್ದಾರೆ​.

ಜಿಲ್ಲೆಯಲ್ಲಿಂದು ನಾಲ್ವರು ಪುರುಷರಿಗೆ ಹಾಗೂ ಇಬ್ಬರು ಮಹಿಳೆಯರಿಗೆ ಸೋಂಕು ದೃಢವಾಗಿದೆ. ಸೋಂಕಿತ ಆರು ಜನರಲ್ಲಿ ಮೂವರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದ ಒಂದೇ ಕುಟುಂಬದ 45 ವರ್ಷದ ಪುರುಷ, 40 ವರ್ಷದ ಮಹಿಳೆ ಹಾಗೂ 17 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದೆ. ಇವರು ಆಂಧ್ರಪ್ರದೇಶದ ವಿಜಯವಾಡದಿಂದ ಜೂನ್ 16 ರಂದು ಗಂಗಾವತಿಯ ಶ್ರೀರಾಮನಗರಕ್ಕೆ ಬಂದಿದ್ದರು ಎಂದು ಡಿಸಿ ತಿಳಿಸಿದರು.

ಕೊರೊನಾ ಕೇಸ್​ಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪಿ. ಸುನಿಲ್​​ ಕುಮಾರ್

ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ 65 ವರ್ಷದ ವೃದ್ಧನಿಗೆ ಸೋಂಕು ತಗುಲಿದೆ. ಬಳ್ಳಾರಿ ಜಿಲ್ಲೆಯ ಮಲಪನಗುಡಿ ಗ್ರಾಮದಿಂದ ಈ ವೃದ್ಧ ಜೂನ್ 14 ರಂದು ಗ್ರಾಮಕ್ಕೆ ಬಂದಿದ್ದ. ಹೊಸಲಿಂಗಾಪುರ ಗ್ರಾಮದ ಜಿಂದಾಲ್ ಉದ್ಯೋಗಿ 38 ವರ್ಷದ ಪುರುಷನಿಗೂ ಸೋಂಕು ದೃಢಪಟ್ಟಿದೆ. ಯಲಬುರ್ಗಾ ತಾಲೂಕಿನ 14 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಈ ಬಾಲಕ ಜೂನ್ 16 ರಂದು ಬೆಂಗಳೂರಿನಿಂದ ಬಂದಿದ್ದಾನೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸೋಂಕಿತರೆಲ್ಲರನ್ನು ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರು ಪತ್ತೆಯಾದ ಪ್ರದೇಶಗಳಿಗೆ ಈಗಾಗಲೇ ಅಧಿಕಾರಿಗಳು ಭೇಟಿ ನೀಡಿ ಕಂಟೈನ್ಮೆಂಟ್ ಪ್ರದೇಶವನ್ನಾಗಿ ಮಾಡುತ್ತಿದ್ದಾರೆ. ಅಲ್ಲದೆ ಸೋಂಕಿತರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಹೇಳಿದರು‌.

ABOUT THE AUTHOR

...view details