ಗಂಗಾವತಿ:ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ಹೆಚ್ಚು ಬಳಕೆಯಲ್ಲಿದ್ದ ಪ್ರೊಜೆಕ್ಟರ್ ಮೂಲಕ ಮಕ್ಕಳಿಗೆ ಪಾಠ ಮಾಡುವ ಸ್ಮಾರ್ಟ್ ಕ್ಲಾಸ್ ಭಾಗ್ಯ ಇನ್ನು ಮುಂದೆ ಸರ್ಕಾರದ ಪ್ರಾಥಮಿಕ ಶಾಲಾ ಮಕ್ಕಳಿಗೂ ಲಭಿಸಲಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಭಾಗ್ಯ - ganagavathi MLA paranna munavalli
ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಪ್ರಾಯೋಗಿಕ ಪೈಲಟ್ ಯೋಜನೆಗೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
ಪ್ರಾಯೋಗಿಕ ಪೈಲಟ್ ಯೋಜನೆಗೆ ಚಾಲನೆ
ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಪ್ರಾಯೋಗಿಕ ಪೈಲಟ್ ಯೋಜನೆಗೆ ಆನೆಗೊಂದಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ಈಗಷ್ಟೇ ಶಾಲೆಗಳು ಆರಂಭವಾಗುತ್ತಿವೆ. ಕೊರೊನಾದಂತಹ ಸಂದರ್ಭದಲ್ಲಿ ಮೌಖಿಕ ಪಾಠದ ಬದಲಿಗೆ ಇಂತಹ ತಂತ್ರಜ್ಞಾನ ಆಧಾರಿತ ಚಟುವಟಿಕೆಗೆ ಹೆಚ್ಚು ಒತ್ತು ನೀಡಬೇಕಿದೆ ಎಂದರು. ಈ ಸಂದರ್ಭ ಬಿಇಒ ಸೋಮಶೇಖರಗೌಡ ಇದ್ದರು.