ಕೊಪ್ಪಳ: ತಾಲೂಕಿನ ಯಲಮಗೇರಾ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆ ಕುಸಿದು ಮೂವರ ದುರ್ಮರಣ: ಸ್ಥಳಕ್ಕೆ ಕೊಪ್ಪಳ ಎಸ್ಪಿ ಭೇಟಿ, ಪರಿಶೀಲನೆ - ಕೊಪ್ಪಳದಲ್ಲಿ ಮನೆ ಕುಸಿದು ಮೂವರು ಸಾವು
ಕೊಪ್ಪಳದ ಯಲಮಗೇರಾ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ ಹಿನ್ನೆಲೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಕುಸಿದು ಮೂವರು ಮಕ್ಕಳು ದುರ್ಮರಣ
ಮನೆ ಕುಸಿದು ಮೂವರ ದುರ್ಮರಣ
ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮೂವರು ಮೃತಪಟ್ಟ ಬಗ್ಗೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಹಿನ್ನೆಲೆ ಇಲ್ಲಿಗೆ ಬಂದು ಪರಿಶೀಲಿಸಲಾಗಿದೆ. ಘಟನೆಯಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಈ ಮೂರು ಮಕ್ಕಳ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಳೆ ಮನೆಯಾಗಿದ್ದರಿಂದ ಮನೆ ಪೂರ್ಣ ಶಿಥಿಲಗೊಂಡಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ಎಸ್ಪಿ ಮಾಹಿತಿ ನೀಡಿದ್ರು.