ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಅರ್ಧ ಡಜನ್​ಗೂ ಹೆಚ್ಚು ಆಕಾಂಕ್ಷಿಗಳಿದ್ದಾರೆ: ಎಸ್.ಆರ್. ಪಾಟೀಲ್ - Confusion of CM position in Congress

ಚುನಾವಣೆ ನಡೆಯಬೇಕು, ಶಾಸಕಾಂಗ ಸಭೆಯಲ್ಲಿ ಶಾಸಕರು ನಿರ್ಧಾರ ಮಾಡುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ಮೊದಲು ಕಿತ್ತೆಸೆಯಬೇಕು. ಚುನಾವಣೆಯಲ್ಲಿ ನಮಗೆ ಬಹುಮತ ಬಂದಾಗ ಸಿಎಂ ಬಗ್ಗೆ ನಿರ್ಧಾರ ಮಾಡೋಣ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.

ಎಸ್.ಆರ್. ಪಾಟೀಲ್ ಮಾತು
ಎಸ್.ಆರ್. ಪಾಟೀಲ್ ಮಾತು

By

Published : Jun 24, 2021, 4:04 PM IST

ಕೊಪ್ಪಳ:ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಧ ಡಜನ್​ಗೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಸಿಎಂ ಸ್ಥಾನದ ಕುರಿತು ಹಾದಿ ಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.

ಎಸ್.ಆರ್. ಪಾಟೀಲ್ ಮಾತು

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಬಹಳ‌ ಜನ ಸಿಎಂ ಆಕಾಂಕ್ಷಿಗಳಿದ್ದಾರೆ. ನನಗೂ ಬಹಳ ಜನ ಅಭಿಮಾನಿಗಳಿದ್ದು, ಅನೇಕರು ಪಾಟೀಲ್​ರೇ ನೀವು ಸಿಎಂ ಸ್ಥಾನಕ್ಕೆ ಯೋಗ್ಯರಿದ್ದೀರಿ ಎಂದು ಹೇಳುತ್ತಾರೆ. ಆದರೆ ನಾನು ಅದನ್ನು ಹೇಳಲು ಆಗುತ್ತಾ ಎಂದು ಪ್ರಶ್ನಿಸಿದರು.

ನಮ್ಮಲ್ಲಿ ಮೂಲ, ವಲಸಿಗರೆಂಬ ಭಿನ್ನಾಭಿಪ್ರಾಯವಿಲ್ಲ. ನಮ್ಮ ಪಕ್ಷದಲ್ಲಿ ನಾಯಕರಿಗೆ ಕೊರತೆಯಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿ ಉತ್ತಮ ಆಡಳಿತ ನೀಡಿದ್ದಾರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಸನ್ಯಾಸಿಗಳಾಗಿದ್ದರೆ ಮಠದಲ್ಲಿ ಇರುತ್ತಾರೆ. ಶಾಸಕಾಂಗ ಸಭೆಯಲ್ಲಿ ಯಾರನ್ನು ಸಿಎಂ ಎಂದು ತೀರ್ಮಾನಿಸುತ್ತಾರೋ ಅವರು ಸಿಎಂ ಆಗುತ್ತಾರೆ ಎಂದರು.

ಓದಿ:ಸಿಎಂ ರೇಸ್​ನಲ್ಲಿ ನೀವು ಇದ್ದೀರಾ? ಪ್ರಶ್ನೆಗೆ ಜಿ‌. ಪರಮೇಶ್ವರ್ ಹೇಳಿದ್ದೇನು..?

ABOUT THE AUTHOR

...view details