ಕೊಪ್ಪಳ: ಎರಡನೇ ತಿರುಪತಿ ಎಂದು ಹೆಸರಾಗಿರುವ ಜಿಲ್ಲೆಯ ಐತಿಹಾಸಿಕ ಕನಕಗಿರಿ ಪಟ್ಟಣದಲ್ಲಿರುವ ಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮರಥೋತ್ಸವ ಇಂದು ಬೆಳಗ್ಗೆ ಸಡಗರದಿಂದ ನಡೆಯಿತು.
ಪ್ರತಿ ವರ್ಷ ಸಂಜೆಯ ವೇಳೆಯಲ್ಲಿ ನಡೆಯುತ್ತಿದ್ದ ಬ್ರಹ್ಮರಥೋತ್ಸವವು ಈ ಬಾರಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆಯೇ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಗೋವಿಂದ ಗೋವಿಂದ ಎಂಬ ಭಕ್ತರ ನಾಮಸ್ಮರಣೆ ಮುಗಿಲು ಮುಟ್ಟಿತ್ತು.