ಕೊಪ್ಪಳ:ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರವೊಂದರಲ್ಲಿ ಓರ್ವ ವಿದ್ಯಾರ್ಥಿಗಾಗಿ ಸುಮಾರು ಸುಮಾರು 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆ ನಡೆದಿದೆ. ವಿದ್ಯಾರ್ಥಿ ಪರೀಕ್ಷೆಗೆ ಗೈರಾಗಿದ್ದರಿಂದ ಸಿಬ್ಬಂದಿ ಕಾದು ಕುಳಿತರೂ ಪ್ರಯೋಜನವಾಗದಂತಾಗಿದೆ. ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೆಹಬೂಬ್ ಹುಸೇನ್ ಎಂಬ ಒಬ್ಬನೇ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಬೇಕಿತ್ತು.
ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಈ ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಕೊಠಡಿ ಮೇಲ್ವಿಚಾರಕರು, ಕಚೇರಿ ಸಹಾಯಕರು, ಪರಿಚಾರಕರು, ಇಬ್ಬರು ಆಶಾ ಕಾರ್ಯಕರ್ತೆಯರು, ದೈಹಿಕ ಶಿಕ್ಷಕರು, ಓರ್ವ ಪೊಲೀಸ್ ಸಿಬ್ಬಂದಿ, ಓರ್ವ ಸ್ಥಾನಿಕ ಜಾಗೃತ ದಳದ ಅಧಿಕಾರಿ, 3 ಜನ ಫ್ಲೈಯಿಂಗ್ ಸ್ಕ್ವಾಡ್, ಮೂವರು ಮಾರ್ಗಾಧಿಕಾರಿಗಳು, ಇಬ್ಬರು ಖಜಾನೆ ಅಧಿಕಾರಿಗಳ ಕಾರ್ಯನಿರ್ವಹಣೆ ಕಾರ್ಯನಿರ್ಹಣೆಗೆ ನಿಯೋಜನೆಗೊಂಡು ಕರ್ತವ್ಯದಲ್ಲಿ ನಿರತವಾಗಿದ್ದರು.