ಕರ್ನಾಟಕ

karnataka

ETV Bharat / state

ವೈದ್ಯರಾದ ಸಿಬ್ಬಂದಿ: ಆ್ಯಂಬುಲೆನ್ಸ್​​ನಲ್ಲೇ​​ ತುಂಬು ಗರ್ಭಿಣಿಗೆ ಹೆರಿಗೆ - ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮ

ತುಂಬು ಗರ್ಭಿಣಿಯೊಬ್ಬರು ಆ್ಯಂಬುಲೆನ್ಸ್​​ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಬಳಿ ನಡೆದಿದೆ.

ಆ್ಯಂಬುಲೆನ್ಸ್​​ನಲ್ಲೇ ಹೆಣ್ಣು ಮಗುವಿಗೆ ಜನ್ಮ
ಆ್ಯಂಬುಲೆನ್ಸ್​​ನಲ್ಲೇ ಹೆಣ್ಣು ಮಗುವಿಗೆ ಜನ್ಮ

By

Published : May 8, 2020, 3:56 PM IST

ಗಂಗಾವತಿ: ತುಂಬು ಗರ್ಭಿಣಿಗೆ ವಿಪರೀತವಾದ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ, ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿರುವಾಗ ಆ್ಯಂಬುಲೆನ್ಸ್​​ನಲ್ಲಿಯೇ ಹೆರಿಗೆಯಾದ ಘಟನೆ ಸಮೀಪದ ಸಿಂಗನಾಳ ಗ್ರಾಮದ ಬಳಿ ನಡೆದಿದೆ.

ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಪೂಜಾ ಬಸವರಾಜ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆ್ಯಂಬುಲೆನ್ಸ್​​​ನಲ್ಲಿ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಹೆರಿಗೆಯಾಗಿದೆ. ಪೂಜಾ ಅವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಆ್ಯಂಬುಲೆನ್ಸ್ ಸಿಬ್ಬಂದಿ ದ್ಯಾಮಣ್ಣ, ಚಾಲಕ ರಫಿಕ್ ಹಾಗೂ ಆಶಾ ಕಾರ್ಯಕರ್ತೆ ಲಕ್ಷ್ಮಿ, ವೈದ್ಯರಾಗಿ ಹೆರಿಗೆ ಮಾಡಿಸುವಲ್ಲಿ ನೆರವಾಗಿದ್ದಾರೆ. ಇದೀಗ ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಹೆಚ್ಚಿನ ಆರೈಕೆಗಾಗಿ ಗಂಗಾವತಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details