ಕೊಪ್ಪಳ:ಇಂದಿನಿಂದ 3 ದಿನಗಳ ಕಾಲ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ದೊರೆತಿದೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಬೀನಾ ಗೌಸ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಗಣ್ಯರು, ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ತೋರಿ ಜಿಲ್ಲೆಗೆ ಕೀರ್ತಿ ತರುವಂತೆ ಕರೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಆರ್. ಜುಮ್ಮಣ್ಣವರ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.