ಕರ್ನಾಟಕ

karnataka

ETV Bharat / state

ನಮ್ಮ ಪಕ್ಷದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆಯಾಗುತ್ತಿಲ್ಲ: ಸಿದ್ದರಾಮಯ್ಯ - ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸಿಎಂ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ. ಕೆಲ ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ. ಚುನಾವಣೆ ಮುಗಿದ ಬಳಿಕ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

statement of former CM Siddaramaiah in Koppal
ಕೊಪ್ಪಳದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

By

Published : Jun 21, 2021, 2:28 PM IST

ಕೊಪ್ಪಳ:ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗುತ್ತಿಲ್ಲ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಾಲೂಕಿನ ಬಸಾಪುರ ಬಳಿಯ ಖಾಸಗಿ ಏರ್ಪೋರ್ಟ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಸಿಎಂ ಕುರಿತು ನಮ್ಮ ಪಕ್ಷದ ಕೆಲ ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಎಂದರು.

ಕೊಪ್ಪಳದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ನಮ್ಮ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ. ಚುನಾವಣೆ ಮುಗಿದ ಬಳಿಕ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರೋ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ ತಕ್ಷಣ ಅದು ಪಕ್ಷದ ಅಭಿಪ್ರಾಯವಲ್ಲ. ಇದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ ಎಂದರು.

ಅರವಿಂದ ಬೆಲ್ಲದ ಫೋನ್ ಟ್ಯಾಪಿಂಗ್ ಪ್ರಕರಣ ತನಿಖೆಯಾಗಬೇಕು. ಈ ಬಗ್ಗೆ ನಾನು ತನಿಖೆಗೆ ಒತ್ತಾಯ ಮಾಡಿದ್ದೇನೆ. ಇನ್ನೊಬ್ಬರ ಫೋನ್ ಕದ್ದಾಲಿಕೆ ಮಾಡುವ ಅಧಿಕಾರ ಸರ್ಕಾರಕ್ಕಾಗಲಿ, ಪೊಲೀಸರಿಗಾಗಲಿ ಇಲ್ಲ. ಈ ಹಿಂದೆ ರಾಮಕೃಷ್ಣ ಹೆಗಡೆ ಸಮಯದಲ್ಲಿ ಏನಾಗಿದೆ ಗೊತ್ತಿದೆಯಲ್ಲ. ಇದು ಗಂಭೀರವಾದ ವಿಚಾರ ಎಂದರು.

ABOUT THE AUTHOR

...view details