ಕರ್ನಾಟಕ

karnataka

ETV Bharat / state

ಸಿಂಧನೂರಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರ: ಸಂಗಣ್ಣ ಕರಡಿ - ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿಕೆ

ರಾಯಚೂರು ಜಿಲ್ಲೆಯ ಸಿಂಧನೂರಿನ ಆರ್.ಹೆಚ್.ಕ್ಯಾಂಪ್​ಗಳಲ್ಲಿರುವ ಬಾಂಗ್ಲಾ ವಲಸಿಗರಿಗೆ ಪೌರತ್ವ ಪ್ರಮಾಣ‌ ಪತ್ರ ನೀಡಲಾಗುವುದು ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

MP Sanganna karadi
ಸಂಸದ ಸಂಗಣ್ಣ ಕರಡಿ

By

Published : Jan 5, 2020, 5:53 PM IST

ಕೊಪ್ಪಳ: ರಾಯಚೂರಿನ ಸಿಂಧನೂರಿನ ಆರ್.ಹೆಚ್.ಕ್ಯಾಂಪ್​ಗಳಲ್ಲಿರುವ ಬಾಂಗ್ಲಾ ವಲಸಿಗರಿಗೆ ಪೌರತ್ವ ಪ್ರಮಾಣ‌ ಪತ್ರ ನೀಡಲಾಗುವುದು. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವಂತೆ ಮನವಿ ಮಾಡಲಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಸಂಸದ ಸಂಗಣ್ಣ ಕರಡಿ

ನಗರದಲ್ಲಿ ಮಾತನಾಡಿದ ಅವರು, ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಆರ್.ಹೆಚ್.ಕ್ಯಾಂಪ್​​ಗಳಲ್ಲಿ ಸುಮಾರು 700 ಬಾಂಗ್ಲಾ ಕುಟುಂಬಗಳಿದ್ದು, 20 ಸಾವಿರದಷ್ಟು ಬಾಂಗ್ಲಾ ವಲಸಿಗರಿದ್ದಾರೆ. ಅವರೆಲ್ಲಾ 2014ಕ್ಕೂ ಮುನ್ನ ಇಲ್ಲಿಗೆ ಬಂದು ಜೀವನ ನಡೆಸುತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ಅವರಿಗೆ ಪೌರತ್ವ ನೀಡಲಾಗುತ್ತಿದ್ದು, ಜನವರಿ 15 ರೊಳಗೆ ಸಿಂಧನೂರಿನಲ್ಲಿ ಪೌರತ್ವ ಪತ್ರ ವಿತರಣಾ ಸಮಾರಂಭ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಕಟೀಲ್​ ಅವರಿಗೆ ಪತ್ರ ಬರೆದ ಸಂಗಣ್ಣ ಕರಡಿ

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪಾಲ್ಗೊಳ್ಳಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಅವರನ್ನು ಕರೆತರುವ ದಿನಾಂಕ ನಿಗದಿಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ABOUT THE AUTHOR

...view details