ಕೊಪ್ಪಳ:ಈ ಭಾಗಕ್ಕೆ ಸ್ಟೀಲ್ ಪಾರ್ಕ್ ಘೋಷಣೆ ಮಾಡುವಂತೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಆಗ್ರಹಿಸಿದ್ದಾರೆ.
ಕೊಪ್ಪಳಕ್ಕೆ ಸ್ಟೀಲ್ ಪಾರ್ಕ್ ಘೋಷಣೆ ಮಾಡುವಂತೆ ಶಾಸಕ ಹಿಟ್ನಾಳ್ ಆಗ್ರಹ
ಕೊಪ್ಪಳಕ್ಕೆ ಸ್ಟೀಲ್ ಪಾರ್ಕ್ ಘೋಷಣೆ ಮಾಡುವಂತೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಆಗ್ರಹಿಸಿದ್ದಾರೆ.
ತಾಲೂಕಿನ ಬಸಾಪುರ ಬಳಿ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಭಿವೃದ್ಧಿಪಡಿಸಿರುವ ಕೈಗಾರಿಕಾ ವಸಾಹತು ಪ್ರದೇಶ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಭಾಗದಲ್ಲಿ ದೊಡ್ಡ ದೊಡ್ಡ ಸ್ಟೀಲ್ ಕಾರ್ಖಾನೆಗಳು ಇವೆ. ಹೆಚ್ಚು ಕಬ್ಬಿಣ ಉತ್ಪಾದನೆಯಾಗುತ್ತಿದೆ. ಹೀಗಾಗಿ ಇಲ್ಲಿ ಸ್ಟೀಲ್ ಪಾರ್ಕ್ ಘೋಷಣೆ ಮಾಡಬೇಕು. ಅದರಿಂದ ಅನೇಕ ಸೌಲಭ್ಯಗಳು ದೊರೆಯುತ್ತವೆ. ಅಭಿವೃದ್ಧಿ ಜೊತೆಗೆ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಆಗ್ರಹಿಸಿದರು.
ಕೊಪ್ಪಳ ಜಿಲ್ಲೆಯಾದ ಬಳಿಕ ಇಲ್ಲಿ ಸಾಕಷ್ಟು ಕೈಗಾರಿಕೆಗಳನ್ನು ಪ್ರಾರಂಭಿಸಲಾಗಿದೆ. ಆದರೆ ನಿರೀಕ್ಷೆಯಂತೆ ಜಿಲ್ಲೆ ಅಭಿವೃದ್ಧಿಯಾಗಿಲ್ಲ. ಕೈಗಾರಿಕೆಗೆ ಅಗತ್ಯ ಭೂಮಿ, ನೀರು, ವಿದ್ಯುತ್ ನೀಡಲಾಗಿದೆ. ಆದರೆ ಜಿಲ್ಲೆಯ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಕೈಗಾರಿಕೆಗಳಿಗೆ ಭೂಮಿ ನೀಡಿರುವುದರಿಂದ ಕೃಷಿ ಕಡಿಮೆಯಾಗಿದೆ. ಕಾರ್ಖಾನೆಗಳಿಗಾಗಿ ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವುದಾಗಿ ಕಾರ್ಖಾನೆಗಳು ಭರವಸೆ ನೀಡುತ್ತವೆ. ಆದರೆ ವಿದ್ಯಾರ್ಹತೆ ಇಲ್ಲ ಎಂಬ ಕಾರಣ ನೀಡಿ ಕಾರ್ಖಾನೆಗಳಲ್ಲಿ ಡಿ ದರ್ಜೆಯಂತಹ ಕೆಲಸಗಳನ್ನು ನೀಡಲಾಗುತ್ತಿದೆ. ಯುವಕರಿಗೆ ಉದ್ಯೋಗ ಕೌಶಲ್ಯ ಹೆಚ್ಚಿಸುವಂತಹ ಕೆಲಸವಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.