ಗಂಗಾವತಿ(ಕೊಪ್ಪಳ): ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿಂದು ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದ ಕೆಲ ಗಂಟೆಗಳಲ್ಲೇ ಸ್ಥಗಿತಗೊಂಡಿದೆ.
ಗಂಗಾವತಿಯಲ್ಲಿ ದಿಢೀರ್ ಸ್ಥಗಿತಗೊಂಡ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ... ಕಾರಣ?
ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿದ್ದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ತಹಶೀಲ್ದಾರ್ ನೇತೃತ್ವದ ತಂಡ ಸ್ಥಗಿತಗೊಳಿಸಿದೆ.
ದಿಢೀರ್ ಸ್ಥಗಿತಗೊಂಡ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ.
ತೆರವು ಪ್ರಶ್ನಿಸಿ ನಾಲ್ಕು ಹೊಟೇಲ್ ಮಾಲೀಕರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಪೈಕಿ ಎರಡು ಹೊಟೇಲ್ಗಳ ವಿರುದ್ಧವಾಗಿ ಆದೇಶ ಜಾರಿಯಾದ ಹಿನ್ನೆಲೆ ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಕೋರ್ಟ್ನಿಂದ ಆದೇಶ ಕೈ ಸೇರದಿರುವುದು ಹಾಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು.
ಈ ಬಗ್ಗೆ ಮಾತನಾಡಿರುವ ತಹಶೀಲ್ದಾರ್ ಚಂದ್ರಕಾಂತ್ ಅವರು ಆದೇಶ ಕೈಸೇರಿದ ಬಳಿಕ ನಾಳೆಯಿಂದ ಮತ್ತೆ ತೆರವು ಕಾರ್ಯಾಚರಣೆ ಮುಂದುವರೆಸಲಿದ್ದೇವೆ ಎಂದು ತಿಳಿಸಿದರು.