ಕೊಪ್ಪಳ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿರುವ ದೇಶದ್ರೋಹಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ವಿಹೆಚ್ಪಿ ಆಗ್ರಹ - ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ
ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿರುವ ದೇಶದ್ರೋಹಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಶೋಕ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ದೇಶದ್ರೋಹಿಗಳನ್ನು ಗಲ್ಲಿಗೇರಿಸಿ ಎಂದು ಘೋಷಣೆ ಹಾಕಿದರು. ಎನ್ಆರ್ಸಿ, ಸಿಎಎ ವಿರುದ್ಧ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೂಲ್ಯ ಎಂಬ ಯುವತಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ. ಈ ಮೂಲಕ ಆಕೆ ದೇಶದ್ರೋಹವೆಸಗಿದ್ದಾಳೆ. ಆಕೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾರ್ಯಕ್ರಮ ಆಯೋಜಕರನ್ನು ಸಹ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪಾಕಿಸ್ತಾನದ ಪರ ಘೋಷಣೆ ಹಾಕುವವರು ಹೆಚ್ಚುತ್ತಿದ್ದಾರೆ. ನಮ್ಮ ದೇಶದ ಅನ್ನ ತಿಂದು, ಸೌಲಭ್ಯಗಳನ್ನು ಪಡೆದು ಕೆಲವರು ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುತ್ತಿದ್ದಾರೆ. ಇಂತಹ ದೇಶದ್ರೋಹಿಗಳನ್ನು ಕೆಲ ಸಾಹಿತಿಗಳು ಬೆಂಬಲಿಸುತ್ತಿದ್ದಾರೆ. ಇಂತಹವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದ್ರೋಹ ಎಸಗುವವರನ್ನು ಗಲ್ಲಿಗೇರಿಸಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.