ಗಂಗಾವತಿ :ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ರಾಜಕೀಯ ಮಾಡಬೇಡಿ. ಮೊಟ್ಟೆ ಕೊಡಬೇಡಿ ಎಂದು ಹೇಳಿದರೆ ನಾವು ನಿಮ್ಮ ಮಠಕ್ಕೆ ಬಂದು ಕುಳಿತು ಮಠದಲ್ಲಿಯೇ ಮೊಟ್ಟೆ ತಿಂತೀವಿ. ಏನ್ಮಾಡ್ತಿರೋ ನೋಡ್ತಿವಿ. ಹೀಗೆಂದು, ಶಾಲಾ ವಿದ್ಯಾರ್ಥಿನಿಯೊಬ್ಬಳು ಖಡಕ್ ಆಗಿ ಹೇಳಿರುವ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯದ ಕೆಲ ಮಠಾಧೀಶರು ಸರ್ಕಾರದ ಮೇಲೆ ಒತ್ತಡ ಹೇರಿದ್ದನ್ನು ಖಂಡಿಸಿ ನಗರದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.