ಕರ್ನಾಟಕ

karnataka

ETV Bharat / state

ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ - students demands for basic facilities

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ, ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

students protest for hostel basic facilities in gangavathi
ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

By

Published : Feb 7, 2020, 2:22 PM IST

ಗಂಗಾವತಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ, ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಇಲ್ಲಿನ ಹೊಸಳ್ಳಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಚೇರಿಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಯಿತು.

ವಸತಿ ನಿಲಯದಲ್ಲಿ ಊಟ, ಉಪಹಾರ, ಕುಡಿವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಇದೆ. ವಾರ್ಡ್​ನ ಇವುಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಎರಡು ಗಂಟೆಗಳ ನಂತರ ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪರಸಪ್ಪ ಅವರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿ, ತರಾಟೆಗೆ ತೆಗೆದುಕೊಂಡರು. ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಯಿತು.

ABOUT THE AUTHOR

...view details