ಗಂಗಾವತಿ: ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ಗ್ರಾಮೀಣ ಎಸ್ಪಿ ರವಿ ಡಿ. ಚನ್ನಣ್ಣನವರ್ ಅವರನ್ನು ನೋಡಲು ಹಾಗೂ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ವಿದ್ಯಾರ್ಥಿಗಳು ಮುಗಿಬಿದ್ದ ಘಟನೆ ನಗರದಲ್ಲಿ ನಡೆಯಿತು.
ನಗರದ ಚನ್ನಬಸವ ಸ್ವಾಮಿ ಕಲಾ ಮಂದಿರದಲ್ಲಿ ಚನ್ನಣ್ಣವರ್ ಅಭಿಮಾನಿ ಬಳಗ ಹಾಗೂ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಾತುಗಳ್ನು ಆಲಿಸಲು ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಸೇರಿದ್ದರು.ಪರಿಣಾಮ ಕೇವಲ 200 ಜನರ ಸಾಮರ್ಥ್ಯದ ಕಲಾ ಮಂದಿರದಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಗಣ್ಯರು ಸೇರಿದ್ರು. ಪರಿಣಾಮ ಕೂರಲು, ನಿಲ್ಲಲು ಸ್ಥಳಾವಕಾಶವಿಲ್ಲದಂತಾಗಿ ಯುವಕರು ವೇದಿಕೆಯತ್ತ ನುಗ್ಗಿದರು.