ಗಂಗಾವತಿ: ನಗರಸಭೆಗೆ ನಡೆಯುತ್ತಿರುವ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಕಳೆದ ಎರಡು ವಾರದಿಂದ ನಾಪತ್ತೆಯಾಗಿದ್ದ ಬಿಜೆಪಿ ಸದಸ್ಯೆ ಸುಧಾ, ಸೋಮವಾರ ದಿಢೀರ್ ಪ್ರತ್ಯಕ್ಷವಾಗಿ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಕುತೂಹಲ ಮೂಡಿಸಿದ್ದಾರೆ.
ಗಂಗಾವತಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಬಿಜೆಪಿ ಸದಸ್ಯೆ ಸುಧಾ ಕಾಂಗ್ರೆಸ್ನಿಂದ ಕಣಕ್ಕೆ - Gangavati Latest Update News
ಗಂಗಾವತಿ ನಗರಸಭೆಗೆ ನಡೆಯುತ್ತಿರುವ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಬಿಜೆಪಿ ಸದಸ್ಯೆ ಸುಧಾ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದು ಜನರ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿಯಿಂದ ನಿರೀಕ್ಷೆಯಂತೆ ಜಯಶ್ರೀ ಸಿದ್ದಾಪುರ ಅಧ್ಯಕ್ಷೆ, ಹೀರಾಬಾಯಿ ಸಿಂಗ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ನಿಂದ ಮಾಲಾಶ್ರೀ ಅಧ್ಯಕ್ಷೆ ಸ್ಥಾನಕ್ಕೆ ಹಾಗೂ ಸುಧಾ ಉಪಾಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಎರಡೂ ಪಕ್ಷಗಳ ಸದಸ್ಯರು ತಮ್ಮ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಆದರೆ, ಕಾಂಗ್ರೆಸ್ ಸದಸ್ಯರು ಮಾತ್ರ ಪೊಲೀಸ್ ರಕ್ಷಣೆಯಲ್ಲಿ ಆಗಮಿಸಿ ನಾಮ ಪತ್ರ ಸಲ್ಲಿಸಿದರು. ಮೊದಲ ಬಾರಿಗೆ ಇಷ್ಟೊಂದು ಟೈಟ್ ಸೆಕ್ಯುರಿಟಿಯಲ್ಲಿ ಸದಸ್ಯರು ನಾಮಪತ್ರ ಸಲ್ಲಿಸಿರುವುದು ಜನರಲ್ಲಿ ಆತಂಕ ಹಾಗೂ ಫಲಿತಾಂಶದ ಬಗ್ಗೆ ಕುತೂಹಲಕ್ಕೆ ಕಾರಣವಾಗಿದೆ.