ಕರ್ನಾಟಕ

karnataka

ETV Bharat / state

ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ, ಕೊಪ್ಪಳದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅನಿರೀಕ್ಷಿತವಾಗಿ ಎದುರಾದ ಲಾಕ್ ಡೌನ್ ನಿಂದ ಕಾರ್ಮಿಕರು, ಜನರು, ರೈತರು ಸಂಕಷ್ಟಕ್ಕೀಡಾದರು. ಈ ಮೊದಲೇ ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಯುವಲ್ಲಿ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿದರು.

Support akila bharat strike
ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

By

Published : Nov 26, 2020, 3:51 PM IST

ಕೊಪ್ಪಳ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಮುಷ್ಕರ ಬೆಂಬಲಿಸಿ, ನಗರದಲ್ಲೂ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ನಗರದ ತಹಶೀಲ್ದಾರ್ ಕಚೇರಿ ಬಳಿ ಕೆಲಕಾಲ ಪ್ರತಿಭಟನೆ ನಡೆಸಿ, ಬಳಿಕ ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಹೊರಟು ಕೇಂದ್ರೀಯ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅನಿರೀಕ್ಷಿತವಾಗಿ ಎದುರಾದ ಲಾಕ್ ಡೌನ್ ನಿಂದ ಕಾರ್ಮಿಕರು, ಜನರು, ರೈತರು ಸಂಕಷ್ಟಕ್ಕೀಡಾದರು. ಈ ಮೊದಲೇ ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಯುವಲ್ಲಿ ಸರ್ಕಾರಗಳು ವಿಫಲವಾಗಿದೆ.

ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯು ಶ್ರಮಿಕರನ್ನು ಪೂರ್ಣ ಗುಲಾಮಗಿರಿಗೆ ತಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಕೃಷಿ ಸಂಬಂಧಿತ ಕಾಯ್ದೆಗಳ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ವಾಪಸು ಪಡೆಯಬೇಕು. ‌ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರೈಲ್ವೆ, ರಸ್ತೆ, ಸಂಪರ್ಕ, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಪ್ರವೃತ್ತಿಯನ್ನು ನಿಲ್ಲಿಸಬೇಕು.

ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ ಏಳೂವರೆ ಸಾವಿರ ರೂಪಾಯಿಗಳ ನೆರವನ್ನು ಆರು ತಿಂಗಳವರೆಗೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಯಡಿ ಎರಡು ನೂರು ದಿನಗಳ ಉದ್ಯೋಗ ನೀಡಬೇಕು. ಪ್ರತಿದಿನ ಕನಿಷ್ಠ ಕೂಲಿಯನ್ನು 600 ರೂಪಾಯಿಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.

ABOUT THE AUTHOR

...view details