ಗಂಗಾವತಿ :ತಾಲೂಕಿನ ಮಸಾರಿಕ್ಯಾಂಪ್ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಇರುವ ಸಾಧ್ಯತೆ ಕುರಿತು ಪರಿಶೀಲನೆ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿತು.
ಗಂಗಾವತಿಯ ಮಸಾರಿಕ್ಯಾಂಪ್‌ಗೆ ರಸ್ತೆ ಸಂಪರ್ಕ: ಅಧಿಕಾರಿಗಳ ಭೇಟಿ, ಪರಿಶೀಲನೆ - Gangavati latest news
ತಾಲೂಕಿನ ಮಸಾರಿಕ್ಯಾಂಪ್ ಗ್ರಾಮಕ್ಕೆ ಯಾವುದೇ ರಸ್ತೆ ಸಂಪರ್ಕ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ರಸ್ತೆ ಸಂಪರ್ಕ ಕಲ್ಪಿಸಲು ಇರುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಿತು.
![ಗಂಗಾವತಿಯ ಮಸಾರಿಕ್ಯಾಂಪ್‌ಗೆ ರಸ್ತೆ ಸಂಪರ್ಕ: ಅಧಿಕಾರಿಗಳ ಭೇಟಿ, ಪರಿಶೀಲನೆ Gangavati](https://etvbharatimages.akamaized.net/etvbharat/prod-images/768-512-03:02:55:1602063175-kn-gvt-01-07-no-road-for-vllage-officers-visit-and-plan-vis-kac10005-07102020110234-0710f-1602048754-773.jpg)
Gangavati
ಮಸಾರಿಕ್ಯಾಂಪ್ (ಗುಳದಳ್ಳಿ) ಗ್ರಾಮಕ್ಕೆ ತುಂಗಭದ್ರಾ ಎಡದಂಡೆ ಕಾಲುವೆ ಮೇಲಿರುವ ರಸ್ತೆಯ ಮೂಲಕ ಮಾತ್ರ ಗ್ರಾಮಕ್ಕೆ ಪ್ರವೇಶಿಸಲು ಸಾಧ್ಯವಿದೆ. ಅದನ್ನು ಬಿಟ್ಟರೆ ಗ್ರಾಮಕ್ಕೆ ಬೇರೆ ದಾರಿಯಿಲ್ಲ. ಮಳೆಗಾಲ ಬಂದರೆ ಕಾಲುವೆ ಮೇಲಿನ ರಸ್ತೆ ಸಂಪೂರ್ಣ ಹಾಳಾಗಿ ನಡೆದಾಡಲು ಕಷ್ಟಕರವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿರುವ ಜನರು ಬಹುತೇಕ ಬಾಹ್ಯ ಸಂಪರ್ಕ ಕಳೆದುಕೊಳ್ಳುವಂತಹ ಪರಿಸ್ಥಿತಿ ಇದೆ. ಹೀಗಾಗಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಇರುವ ಸಾಧ್ಯತೆಗಳ ಪರಿಶೀಲನೆಗೆ ತಹಶೀಲ್ದಾರ್ ರೇಣುಕಾ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.