ಕರ್ನಾಟಕ

karnataka

ETV Bharat / state

ಸಿಎಎ ಪರರ ಮೇಲೆ ಹಲ್ಲೆಗೆ ಯತ್ನ... ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಹ್ಲಾದ್​ ಜೋಷಿ ಸೂಚನೆ - ‌ಕಿಲ್ಲಾ ಪ್ರದೇಶದ ಐದನೇ ವಾರ್ಡ್​ನ ಈದ್ಗಾ ಕಾಲೋನಿ

ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕರಪತ್ರ ಹಂಚಲು ಮುಂದಾದ ಬಿಜೆಪಿ ನಾಯಕರ ‌ಮೇಲೆ ಯುವಕರ ಗುಂಪು ಹಲ್ಲೆಗೆ ಯತ್ನಿಸಿದ ಘಟನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದು, ಹಲ್ಲೆಗೆ ಯತ್ನಿಸಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ‌ ನೀಡಿದ್ದಾರೆ.

Take strict measures on those who involve in attacks regarding CAA matter: Minister Prahlad Joshi
ಯಾರನ್ನೂ ಒಲೈಸುವ ಅಗತ್ಯವಿಲ್ಲ, ಹಲ್ಲೆಗೆ ಮುಂದಾದವರ ಮೇಲೆ‌ ಕಠಿಣ ಕ್ರಮ ಕೈಗೊಳ್ಳಿ:  ಸಚಿವ ಪ್ರಹ್ಲಾದ್ ಜೋಷಿ ಸೂಚನೆ

By

Published : Jan 12, 2020, 5:10 AM IST

ಗಂಗಾವತಿ:ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಬಗ್ಗೆ ಕರಪತ್ರ ಹಂಚಲು ಮುಂದಾದ ಬಿಜೆಪಿ ನಾಯಕರ ‌ಮೇಲೆ ಹಲ್ಲೆಗೆ ಯತ್ನಿಸಿದ್ದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದುಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪೊಲೀಸರಿಗೆ ಸೂಚಿಸಿದ್ದಾರೆ.

ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ರಾಯಚೂರಿಗೆ ತೆರಳುವ ಮಾರ್ಗ ಮಧ್ಯೆ ಶಾಸಕ ಪರಣ್ಣ ಮುನವಳ್ಳಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರವಾಗಿ ಅನುಷ್ಠಾನಕ್ಕೆ‌ ಬಂದಿದೆ. ಈ ಬಗ್ಗೆ ಬಿಜೆಪಿ ಅಧಿಕೃತ ಕರಪತ್ರ ಹಂಚುವ ಕೆಲಸ ಮಾಡುತ್ತಿದೆ. ಇದಕ್ಕೆ ಯಾರೇ ವಿರೋಧ ವ್ಯಕ್ತಪಡಿಸುವ ಅಥವಾ ತಡೆಯಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಪೊಲೀಸರು ಯಾರನ್ನೂ ಒಲೈಸುವ ಅಗತ್ಯವಿಲ್ಲ ಎಂದರು.

ABOUT THE AUTHOR

...view details