ಕುಷ್ಟಗಿ (ಕೊಪ್ಪಳ): ಶಿಕ್ಷಕರು ಸಮಾಜಕ್ಕೆ ಮಾದರಿಯಾಗಿರಬೇಕು. ಆದರೆ, ಇಲ್ಲೊಬ್ಬ ಶಿಕ್ಷಕ ಮದ್ಯ ಸೇವಿಸುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಚಿತ್ರ ವೈರಲ್ ಆಗಿದ್ದು, ಶಿಕ್ಷಕನ ವಿಲಕ್ಷಣ ವರ್ತನೆಗೆ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತವಾಗಿದೆ.
ಮದ್ಯಸೇವನೆ ಚಿತ್ರ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಶಿಕ್ಷಕ: ನೆಟ್ಟಿಗರಿಂದ ತೀವ್ರ ಆಕ್ರೋಶ - drunken teacher
ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ತಾಂಡಾ ಶಾಲೆಯ ಸಹ ಶಿಕ್ಷಕ ಬಸವರಾಜ ಮಾರಿಹಾಳ್ ಎಂಬುವರು ತಮ್ಮ ಫೇಸ್ಬುಕ್ನಲ್ಲಿ ಮದ್ಯ ಸೇವಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ತಾಂಡಾ ಶಾಲೆಯ ಸಹ ಶಿಕ್ಷಕ ಬಸವರಾಜ ಮಾರಿಹಾಳ್ ಎಂಬುವರು ತಮ್ಮ ಫೇಸ್ಬುಕ್ನಲ್ಲಿ ಮದ್ಯ ಸೇವಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ಮುದೇನೂರು ಗ್ರಾ.ಪಂ. ಸದಸ್ಯ ಹುಸೇನಪ್ಪ ಮುದೇನೂರು ಗಮನಿಸಿ, ಸಂಬಂಧಿಸಿದ ಸಿಆರ್ಪಿ ಗಮನಕ್ಕೆ ತಂದಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಶಿಕ್ಷಕ ಬಸವರಾಜ ಮಾರಿಹಾಳ್ ಫೇಸ್ ಬುಕ್ ನಿಂದ ಚಿತ್ರ ತೆರವುಗೊಳಿಸಿದ್ದಾರೆ. ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ್ ಪ್ರತಿಕ್ರಿಯಿಸಿ, ಶಿಕ್ಷಕ ಮದ್ಯ ಸೇವಿಸುವ ಚಿತ್ರವನ್ನು ಫೇಸ್ಬುಕ್ನಲ್ಲಿ ಹಾಕಿಕೊಂಡಿರುವ ಪ್ರಕರಣ ವಿಚಿತ್ರವಾಗಿದೆ. ಇದು ಸಮಾಜಕ್ಕೆ ತಪ್ಪು ಸಂದೇಶ ರವಾನೆಗೆ ಕಾರಣವಾಗುತ್ತಿದ್ದು, ಶಿಕ್ಷಕನ ವಿರುದ್ಧ ಅಮಾನತ್ತಿನ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.