ಗಂಗಾವತಿ: ತಾಲೂಕಿನ ಚಿಕ್ಕರಾಂಪೂರದಲ್ಲಿರುವ ಅಂಜನಾದ್ರಿ ದೇಗುಲಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ, ಪೂಜೆಯ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾದಾಸ್ ಬಾಬಾ ಎಂಬುವರು ಧರಣಿಗೆ ಯತ್ನಿಸಿದ ಪ್ರಸಂಗ ಜರುಗಿತು.
ದೇಗುಲದಲ್ಲಿ ಪೂಜೆ ಸಲ್ಲಿಸಲು ನ್ಯಾಯಾಲಯ ಆದೇಶ ನೀಡಿದ್ದರೂ ಕೂಡ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ ಎಂದು ಆಕ್ಷೇಪಿಸಿದ ವಿದ್ಯಾದಾಸ್ ಬಾಬಾ, ರಾಜ್ಯಪಾಲರ ಮುಂದೆಯೇ ಧರಣಿಗೆ ಯತ್ನಿಸಿದರು. ಈ ಸಂದರ್ಭದಲ್ಲಿ ಬಾಬಾ ಮತ್ತು ಅಧಿಕಾರಿಗಳ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ವಿದ್ಯಾದಾಸ್ನನ್ನು ವಶಕ್ಕೆ ಪಡೆದು ಅಲ್ಲಿಂದ ಕರೆದೊಯ್ದರು.