ಕರ್ನಾಟಕ

karnataka

ETV Bharat / state

ವಿದ್ಯುತ್​ ಸ್ಪರ್ಶಿಸಿ ಮೃತಪಟ್ಟ ಬಾಲಕನ ಮನೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೇಟಿ.. - boy death to electrick shock

ಘಟನೆ ಕುರಿತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಎಲಿಗಾರ, ರಕ್ಷಣಾಧಿಕಾರಿ (ಸಾಂಸ್ಥಿಕ) ಪ್ರಶಾಂತರೆಡ್ಡಿ ಮೃತ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Kustagai
Kustagai

By

Published : Jun 6, 2020, 3:04 PM IST

ಕೊಪ್ಪಳ :ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಇತ್ತೀಚಿಗೆ ವಿದ್ಯುತ್ ತಗುಲಿ ಮೃತಪಟ್ಟ ಬಾಲಕ ಯಮನೂರಪ್ಪನ ಮನೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಎಲಿಗಾರ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಘಟನೆ ಕುರಿತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಎಲಿಗಾರ, ರಕ್ಷಣಾಧಿಕಾರಿ (ಸಾಂಸ್ಥಿಕ) ಪ್ರಶಾಂತರೆಡ್ಡಿ ಮೃತ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ಬಾಲಕ ಕುಷ್ಟಗಿಯ ಪ್ರೌಢ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಾಕ್​ಡೌನ್‌ನಿಂದ ರಜಾ ಆವಧಿಯ ನಿಮಿತ್ತ ಕುಟುಂಬ ನಿರ್ವಹಣೆಗೆ ಸಹಾಯಕವಾಗಲಿ ಎಂಬ ಆಶಯದಿಂದ ಕುಷ್ಟಗಿ ನಗರದ ಶಾಂತಲಿಂಗಪ್ಪ ಸೂಡಿ ಎಂಬುವರ ಫ್ಯಾಕ್ಟರಿಯಲ್ಲಿ ತಿಂಗಳಿಗೆ ಒಂದು ಸಾವಿರ ರೂ. ಸಂಬಳದಂತೆ ಕಳೆದ ನಾಲ್ಕು ದಿನದ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದ.

ABOUT THE AUTHOR

...view details