ಕೊಪ್ಪಳ:ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘದ ಚುನಾವಣೆ ನಡೆದಿದ್ದು, ಇದರಲ್ಲಿ 10 ಅಭ್ಯರ್ಥಿಗಳ ಪೈಕಿ ಎಂಟು ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ ಇಬ್ಬರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗಿದೆ ಎಂದು ಸಂಘದ ಮುಖಂಡ ಶಬ್ಬೀರ್ ಅಹ್ಮದ್ ಹೇಳಿದರು.
ಬೀದಿಬದಿ ವ್ಯಾಪಾರಿಗಳ ಸಂಘದ ಚುನಾವಣೆ: 8 ಅಭ್ಯರ್ಥಿಗಳು ಅವಿರೋಧ ಆಯ್ಕೆ - ಕೊಪ್ಪಳ ಸುದ್ದಿ 2020
ಬೀದಿಬದಿ ವ್ಯಾಪಾರಿಗಳ ಸಂಘದ ಚುನಾವಣೆ ನಡೆದಿದ್ದು, ಇದರಲ್ಲಿ 10 ಅಭ್ಯರ್ಥಿಗಳ ಪೈಕಿ 8 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸೂಚನೆಯಂತೆ ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಕೊಪ್ಪಳ ನಗರದಲ್ಲಿ ಈಗ ಸುಮಾರು 700 ಜನರು ಬೀದಿ ವ್ಯಾಪಾರಿಗಳು ಇದ್ದಾರೆ. ಇವರೆಲ್ಲರೂ ನೋಂದಣಿಯಾಗಿರುವವರು. ಇನ್ನೂ ಕೆಲವರು ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಬೀದಿಬದಿ ವ್ಯಾಪಾರಿಗಳ ಸಂಘಕ್ಕೆ ಆಯ್ಕೆಯಾಗಿರುವ ನೂತನ ಸದಸ್ಯರಿಗೆ ಫೆ. 1ರಂದು ನಗರದ ಶಾದಿ ಮಹಲ್‌ನಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯ ಜಮಾಲ್, ಸದ್ದಾಂ ಖಾಜಿ, ಆನಂದ ಅರಕೇರಿ ಸೇರಿದಂತೆ ಮೊದಲಾದವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.