ಕೊಪ್ಪಳ: ಕೊಪ್ಪಳ ಜಿಲ್ಲಾ ಪಂಚಾಯಿತಿಯ ಮೊದಲ ಮಹಿಳಾ ಸಿಇಒ ಆಗಿ ಫೌಜಿಯಾ ತರನುಮ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಕೊಪ್ಪಳ ಜಿಲ್ಲಾ ಪಂಚಾಯಿತಿ ಮೊದಲ ಮಹಿಳಾ ಸಿಇಒ ಫೌಜಿಯಾ ತರನುಮ್ - The first woman CEO of Koppal district panchayat
ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ರಘುನಂದನಮೂರ್ತಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ 2015 ರ ಐಎಎಸ್ ಬ್ಯಾಚ್‌ನ ಫೌಜಿಯಾ ತರನುಮ್ ಅವರನ್ನು ಜಿ.ಪಂ ಸಿಇಒ ಆಗಿ ನೇಮಕ ಮಾಡಿದೆ.

ಫೌಜಿಯಾ ಮೂಲತಃ ಬೆಂಗಳೂರಿನವರಾಗಿದ್ದು, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ, ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ರಾಜ್ಯ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಕೊಪ್ಪಳ ಜಿಲ್ಲೆಯ ಜಿ.ಪಂ ಮೊದಲ ಮಹಿಳಾ ಸಿಇಒ ಅಧಿಕಾರ ಸ್ವೀಕರಿಸಿದ್ದಾರೆ.
"ಕೊಪ್ಪಳ ಜಿಲ್ಲೆಗೆ ಮೊದಲ ಬಾರಿಗೆ ಸಿಇಒ ಆಗಿ ಬಂದಿದ್ದು, ಎಲ್ಲಾ ತಾಲ್ಲೂಕು ಮತ್ತು ಗ್ರಾ.ಪಂ ಸೇರಿದಂತೆ ವಿವಿಧ ಇಲಾಖಾವಾರು ಮಾಹಿತಿ ಪಡೆದು ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ನೀಡುವುದರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಇದಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಅಗತ್ಯ. ಕೋವಿಡ್ -19 ಇಂತಹ ಸಂದರ್ಭದಲ್ಲಿ ಜನರು ನಿರ್ಲಕ್ಷ್ಯ ವಹಿಸದೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು ಮತ್ತು ಕೊರೊನಾ ನಿಯಮಗಳನ್ನು ಪಾಲಿಸಿ" ಎಂದು ಮನವಿ ಮಾಡಿದರು.