ಕುಷ್ಟಗಿ(ಕೊಪ್ಪಳ): ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸೇವಾನಿರತ ಗುತ್ತಿಗೆ, ಹೊರ ಗುತ್ತಿಗೆ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಜೂನ್ 4ರಿಂದ ಕೆಲಸ ಬಹಿಷ್ಕರಿಸಿ ಅನಿರ್ದಿಷ್ಟವಾಧಿ ಅಸಹಕಾರ ಚಳುವಳಿ ನಡೆಸಲಾಗುವುದು ಎಂದು ಸಂಘದ ಸಂಘಟನಾ ಕಾರ್ಯದರ್ಶಿ ಗವಿಸಿದ್ದಪ್ಪ ತಿಳಿಸಿದ್ದಾರೆ.
ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ: ಅಸಹಕಾರ ಚಳುವಳಿ ನಡೆಸುವುದಾಗಿ ಗುತ್ತಿಗೆ ನೌಕರರಿಂದ ಎಚ್ಚರಿಕೆ - ಮುಖ್ಯ ವೈದ್ಯಾಧಿಕಾರಿ ಡಾ. ಚಂದ್ರಕಾಂತ ಮಂತ್ರಿ
ಕೊರೊನಾ ಬಿಕ್ಕಟ್ಟಿನಲ್ಲಿಯೂ ಸೌಲಭ್ಯಗಳ ಕೊರತೆ ನಡುವೆ ಕೆಲಸ ನಿರ್ವಹಿಸಿದ್ದರೂ ಈ ಸರ್ಕಾರಕ್ಕೆ ಕರುಣೆ ಬಂದಿಲ್ಲ. ಬೇಡಿಕೆಗಳ ಈಡೇರಿಕೆಗೆ ಜೂನ್ 4ರಿಂದ ಕೆಲಸ ಬಹಿಷ್ಕರಿಸಿ ಅಸಹಕಾರ ಚಳುವಳಿ ನಡೆಸುವುದಾಗಿ ಗುತ್ತಿಗೆ, ಹೊರ ಗುತ್ತಿಗೆ ನೌಕರರು ಎಚ್ಚರಿಸಿದರು.
ಗುತ್ತಿಗೆ, ಹೊರಗುತ್ತಿಗೆ ನೌಕರರು
ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಚಂದ್ರಕಾಂತ ಮಂತ್ರಿ ಅವರಿಗೆ ಅಸಹಕಾರ ಚಳುವಳಿ ಹಿನ್ನೆಲೆ ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಸರ್ಕಾರದ ಮಟ್ಟದಲ್ಲಿ ಸಮಿತಿ ರಚಿಸುವಂತೆ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೆ ಬಳಿಕ ಒಂದು ವಾರದ ಗಡವು ನೀಡಿದ್ದರೂ ಸರ್ಕಾರ ನೌಕರರ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.