ಕರ್ನಾಟಕ

karnataka

ETV Bharat / state

ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪತ್ತೆ:  ಕೊಪ್ಪಳ ಡಿಸಿ - koppal

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಪತ್ತೆಯಾದ ಕೊರೊನಾ ಸೋಂಕಿತ ರೋಗಿ-2254 ರ ಪ್ರಾಥಮಿಕ ಸಂಪರ್ಕದಲ್ಲಿದ್ದ, 12 ಜನರನ್ನು ಪತ್ತೆ ಮಾಡಿ ಕ್ವಾರಂಟೈನ್​ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ಕುಮಾರ್​ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್​​
ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್​​

By

Published : May 27, 2020, 3:02 PM IST

ಕೊಪ್ಪಳ:ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಪತ್ತೆಯಾದ ಸೋಂಕಿತ P-2254,ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 12 ಜನರನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್​​ ಹೇಳಿದ್ದಾರೆ.

ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ 12 ಜನರನ್ನು ಪತ್ತೆಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚಲಾಗುತ್ತಿದ್ದು, ಅವರನ್ನು ಸಹ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ಸೋಂಕಿತ ವ್ಯಕ್ತಿ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿನ ಬ್ಯಾಂಕ್ ಸಿಬ್ಬಂದಿಯಾಗಿದ್ದ, ಅಲ್ಲಿನ ಪ್ರಾಥಮಿಕ ಸಂಪರ್ಕಿತರನ್ನು ರಾಯಚೂರು ಜಿಲ್ಲಾಡಳಿತ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಿದೆ ಎಂದರು.

ABOUT THE AUTHOR

...view details