ಕೊಪ್ಪಳ:ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣದಿಂದಾಗಿ ಕೋಟ್ಯಂತರ ಅಭಿಮಾನಿಗಳು ಶೋಕದಲ್ಲಿ ಮುಳುಗಿದ್ದು, ಅವರ ಸ್ಮರಣೆ ಒಂದಿಲ್ಲೊಂದು ರೀತಿಯಲ್ಲಿ ನಡೆಯುತ್ತಿದೆ.
ಕೊಪ್ಪಳ: ತರಕಾರಿ ಮಾರುಕಟ್ಟೆಗೆ ಪುನೀತ್ ರಾಜಕುಮಾರ್ ಹೆಸರಿಟ್ಟ ಗ್ರಾಮಸ್ಥರು - ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ತರಕಾರಿ ಮಾರುಕಟ್ಟೆಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡುವ ಮೂಲಕ ವಿಶೇಷ ರೀತಿಯಲ್ಲಿ ಅಭಿಮಾನ ಮೆರೆದಿದ್ದಾರೆ. ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಅವರು ಪಿಆರ್‌ಕೆ ಮಾರುಕಟ್ಟೆ ಉದ್ಘಾಟಿಸಿದ್ದಾರೆ.
ಕೊಪ್ಪಳ: ತರಕಾರಿ ಮಾರುಕಟ್ಟೆಗೆ ಪುನೀತ್ ರಾಜಕುಮಾರ್ ಹೆಸರಿಟ್ಟ ಗ್ರಾಮಸ್ಥರು
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ತರಕಾರಿ ಮಾರುಕಟ್ಟೆಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡುವ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ.
ಪಿಆರ್‌ಕೆ (ಪುನೀತ್ ರಾಜಕುಮಾರ) ಮಾರುಕಟ್ಟೆ ಎಂದು ಗ್ರಾಮಸ್ಥರು ನಾಮಕರಣ ಮಾಡಿದ್ದಾರೆ. ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಅವರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಪಿಆರ್‌ಕೆ ಮಾರುಕಟ್ಟೆ ಉದ್ಘಾಟನೆ ಮಾಡಿದರು. ಪುನೀತ್ ಅವರ ಕಾರ್ಯಗಳು, ಸಾಧನೆ ಹಾಗೂ ಅವರು ಗಳಿಸಿದ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಗ್ಗೆ ಅಪ್ಪು ಅವರ ಗುಣಗಾನ ಮಾಡಿದರು.