ಗಂಗಾವತಿ: ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲುಕಾರಟಗಿ ತಾಲೂಕಿನ ಸಿದ್ದಾಪುರದ ಯುವಕ ರಕ್ತದಲ್ಲೇ 5 ಪುಟಗಳ ಸುದೀರ್ಘ ಪತ್ರ ಬರೆದಿದ್ದಾನೆ.
ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಯುವಕ! ಪತ್ರದಲ್ಲೇನಿದೆ? - blood letter
ಪ್ರಧಾನಮಂತ್ರಿ ನರೇಂದ್ರ ಮೋದಿ ಗಮನ ಸೆಳೆಯಲು ಯುವಕನೊಬ್ಬ ರಕ್ತದಲ್ಲಿ ಐದು ಪುಟಗಳ ಪತ್ರ ಬರೆದಿದ್ದಾನೆ.
ರಕ್ತದಲ್ಲಿ ಪತ್ರಬರೆದ ಯುವಕ
ಮಲ್ಲಿಕಾರ್ಜುನ್ ಹೊಸಮನಿ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಯುವಕ.
ಇವರು ರೈತರ ಪರವಾದ ಹಲವು ಹೋರಾಟ, ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಹರಿಸುವ ಸಂಬಂಧ ಪ್ರತಿಭಟನೆಗಳ ಮೂಲಕ ಜಿಲ್ಲೆಯಲ್ಲಿ ಗಮನ ಸೆಳೆದಿದ್ದಾರೆ. ಇದೀಗ ಪ್ರಧಾನಿಗೆ ತುಂಗಭದ್ರಾ ಜಲಾಶಯದ ಸಮಸ್ಯೆ ನಿವಾರಣೆ ಕುರಿತು ಗಮನ ಹರಿಸುವಂತೆ ಒತ್ತಾಯಿಸಿ ರಕ್ತಪತ್ರ ಬರೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮತ್ತು ತುಂಗಭದಾ ಜಲಾಶಯದ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.