ಕೊಪ್ಪಳ: ರಾಜ್ಯದಲ್ಲಿ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆದಿಲ್ಲ, ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದವರು ಸಿಎಂ ಆಗ್ತಾರೆ ಎಂಬ ಬಗ್ಗೆ ಚರ್ಚೆ ಬೇಡ. ರಾಜ್ಯದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ, ಆ ಕುರಿತು ಚರ್ಚೆಯೂ ಬೇಡ ಎಂದರು.
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದರು ರಾಜ್ಯದಲ್ಲಿ 9 ಲಕ್ಷ ಕಿಲೋ ಮೀಟರ್ ಓಡಿರುವ ಬಸ್ಗಳನ್ನು ಆಕ್ಸಿಜನ್ ಬಸ್ಗಳನ್ನಾಗಿ ಮಾಡಲಾಗಿದ್ದು, 100 ಬಸ್ಗಳನ್ನು ಆಕ್ಸಿಜನ್ ಬಸ್ ಮಾಡಲಾಗಿದೆ. ಈ ಬಸ್ ಗಳಲ್ಲಿ ಐದು ಬೆಡ್, ಒಂದು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಗೊಂದರಂತೆ ಬಸ್ ಮಾಡಲಾಗುವುದು. ರಾಜ್ಯದಲ್ಲಿ ಇನ್ನೂ 14 ದಿನ ಲಾಕ್ಡೌನ್ ಅವಧಿಯಿದೆ. ಈಗ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಸ್ವಲ್ಪ ಕೊರತೆ ಇದೆ. ರಾಜ್ಯದಲ್ಲಿ ಈಗಾಗಲೇ 500 ಬ್ಲಾಕ್ ಫಂಗಸ್ ರೋಗಿಗಳಿದ್ದು, ಆ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.
ಓದಿ:ಪೊಲೀಸರು, ಆಡಳಿತದ ವಿರುದ್ಧ ಹಿಸಾರ್ನಲ್ಲಿ ರೈತರ ಪ್ರತಿಭಟನೆ: ಸ್ಥಳದಲ್ಲಿ ಬಿಗಿ ಬಂದೋಬಸ್ತ್